ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ದಂಪತಿಗಳ ಸಹಿತ ಭೇಟಿ ನೀಡಿದರು.
ಶರನ್ನವರಾತ್ರಿ ಉತ್ಸವದ ಸಡಗರದ ನಡುವೆ ಜಿಲ್ಲಾ ಪೈಕಿ ವರಿಷ್ಠಾಧಿಕಾರಿಯವರು ದೇಗುಲದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ವೈಭವವನ್ನು ವೀಕ್ಷಿಸಿದರು. ಅಲ್ಲದೆ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೊದಿಸಿ ಪ್ರಸಾದ ವಿತರಿಸಿದರು.
ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಗಣೇಶ ನೆಲ್ಲಿಬೆಟ್ಟು, ಚಂದ್ರ ಆಚಾರ್ ಸೇರಿದಂತೆ ಅನೇಕರು ಇದ್ದರು.












