ವಿಶ್ವ ಕೊಂಕಣಿ ಸಂಗೀತ ಮಹಾಮೇಳದ ಗಿನ್ನಿಸ್ ದಾಖಲೆ ಪ್ರಯತ್ನದಲ್ಲಿ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಭಾಗಿ

0
99

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮಂಗಳೂರಿನ ಮಾಂಡ್ ಸೊಭಾಣ್ ಸಂಸ್ಥೆಯ ಮುಂದಾಳತ್ವದಲ್ಲಿ ನವೆಂಬರ್ 3ರಿಂದ 15ರವರೆಗೆ ಮಂಗಳೂರಿನ ಟೌನ್ ಹಾಲ್‌ನಲ್ಲಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಮೇಳ ಆಯೋಜಿಸಲಾಗಿದೆ.

ಕೊಂಕಣಿ ಭಾಷೆ ಮತ್ತು ಸಂಗೀತ ಕ್ಷೇತ್ರದಲ್ಲಿ ವಿಶ್ವಮಟ್ಟದ ಹೊಸ ಇತಿಹಾಸ ನಿರ್ಮಿಸುವ ಉದ್ದೇಶದಿಂದ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ಕಾಲ ನಿರಂತರ ಸಮೂಹ ಗಾಯನ ನಡೆಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನವನ್ನು ಹಮ್ಮಿಕೊಳ್ಳಲಾಗಿದೆ.

ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ 300 ಗಾಯನ ತಂಡಗಳು ಭಾಗವಹಿಸಲಿದ್ದು, ಪ್ರತಿಯೊಂದು ತಂಡಕ್ಕೂ ಒಂದು ಗಂಟೆಯ ಗಾಯನದ ಅವಕಾಶ ನೀಡಲಾಗಿದೆ. ಒಟ್ಟು 6,789ಕ್ಕೂ ಅಧಿಕ ಗಾಯಕರು, 250ಕ್ಕೂ ಅಧಿಕ ಸಂಗೀತ ನಿರ್ದೇಶಕರ 4,500ಕ್ಕೂ ಅಧಿಕ ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ.

Click Here

ವಿಶ್ವ ಕೊಂಕಣಿ ಕಲಾರತ್ನ ಎರಿಕ್ ಬಾಬ್ ಓಜಾರಿಯೋ ಅವರಿಗೆ ಗೌರವ ಸಮರ್ಪಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಸಂಗೀತ ಮಹಾಮೇಳವು ಕೊಂಕಣಿ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ಮಹತ್ವದ ವೇದಿಕೆಯಾಗಲಿದೆ.

ಈ ಐತಿಹಾಸಿಕ ಗಿನ್ನಿಸ್ ದಾಖಲೆ ಪ್ರಯತ್ನದಲ್ಲಿ ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೂ ಭಾಗವಹಿಸುವ ಅವಕಾಶ ಲಭಿಸಿದೆ. ಸಂಸ್ಥೆಯು ನವೆಂಬರ್ 11ರಂದು ಮಧ್ಯಾಹ್ನ 1 ಗಂಟೆಗೆ ಒಂದು ಗಂಟೆಯ ಕಾಲ ಸಮೂಹ ಗಾಯನದಲ್ಲಿ ಭಾಗವಹಿಸಲಿದೆ.

ಕೊಂಕಣಿ ಭಾಷೆ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಇಂತಹ ವಿಶ್ವಮಟ್ಟದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯೂ ತನ್ನದೇ ಆದ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here