ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳಕ್ಕೆ ಬುಧವಾರ ಉಡುಪಿ ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ತೊಡಿಸಿ ಪ್ರಸಾದ ವಿತರಿಸಿ ಗೌರವಿಸಿದರು.
ಜಿ.ಪಂಯೋಜನಾಧಿಕಾರಿ ಶ್ರೀನಿವಾಸ್ ರಾವ್, ಬ್ರಹ್ಮಾವರ ತಾಲೂಕು ದಂಡಾಧಿಕಾರಿ ರಾಜಶೇಖರಮೂರ್ತಿ ಇರ್ವರಿಗೂ ಪ್ರಸಾದ ವಿತರಿಸಿ ಗೌರವಿಸಲಾಯಿತು.
ದೇವಳದ ಟ್ರಸ್ಟಿಗಳಾದ ಸುಬ್ರಾಯ ಆಚಾರ್ಯ, ಜಿ.ಸತೀಶ್ ಹೆಗ್ಡೆ, ಚಂದ್ರ ಪೂಜಾರಿ, ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಕೋಟ ಗ್ರಾಮ ಲೆಕ್ಕಿಗ ಚಲುವರಾಜು,ಕೋಟ ಪಡುಕರೆ ಲ.ಸೋ.ಬ.ಸ.ಪ್ರ.ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ ,ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.











