ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ, ಶ್ರೀ ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕ್ಷೇತ್ರ ಎನ್ನುವ ಪ್ರಸಿದ್ಧಿಯನ್ನು ಹೊಂದಿರುವ ಶ್ರೀ ಕ್ಷೇತ್ರ ಮಾರಣಕಟ್ಟೆಯ ಶ್ರೀ ಬ್ರಹ್ ಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಉತ್ಸವ ಹಾಗೂ ವಾರ್ಷಿಕ ಗೆಂಡ ಸೇವೆ, ಜಾತ್ರಾ ಮಹೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿಸಿದರು.

ಜ.14ರ ಬೆಳಿಗ್ಗೆಯಿಂದಲೇ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ಕ್ಷೇತ್ರದ ಉತ್ಸವಕ್ಕಾಗಿ ಉಡುಪಿ ಹಾಗೂ ಮಂಗಳೂರು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯ ಭಕ್ತರು ಬಂದು ದೇವರ ದರ್ಶನ ಪಡೆದು, ಹೂ ಹಣ್ಣು ಕಾಯಿ ನೆರವೇರಿಸಿ, ಹರಕೆ ಸಲ್ಲಿಸಿರು.
ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ, ದೇವಸ್ಥಾನದ ಆಡಳಿತ ಧರ್ಮದರ್ಶಿ ಸದಾಶಿವ ಶೆಟ್ಟಿ, ಕಾರ್ನಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉದ್ಯಮಿ ಕೃಷ್ಣಮೂರ್ತಿ ಮಂಜ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲಕುಮಾರ ಶೆಟ್ಟಿ, ಮಾಜಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ರಘುರಾಮ ಶೆಟ್ಟಿ , ದೇಗುಲದ ಪಾತ್ರಿಗಳು, ಗಣ್ಯರು ಉಪಸ್ಥಿತರಿದ್ದರು. ರಾತ್ರಿ ಗೆಂಡಸೇವೆ ನಡೆಯಲಿದೆ.











