ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಪ್ರಿಕ್ರಿಯಿಸಿರುವ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ದೃಢೀಕರಿಸಿದ್ದಾರೆ. ಈ ಹಿಂದೆ ಎಂಎಲ್.ಸಿ. ಸ್ಥಾನವನ್ನು ಬಿಟ್ಟುಕೊಟ್ಟಿದ್ದೇನೆ. ಈಗ ಕೆ.ಪಿ.ಸಿ.ಸಿ ಸದಸ್ಯತ್ವವನ್ನು ಬಿಟ್ಟುಕೊಟ್ಟಿದ್ದೇನೆ. ಇದರ ಹಿಂದೆ ಯಾವುದೇ ರಾಜಕೀಯ ಪ್ರೇರಿತ ಉದ್ದೇಶವಿಲ್ಲ. ಕಾಂಗ್ರೆಸ್ ಪಕ್ಷದ ಸದಸ್ಯನಾಗಿ ಮುಂದುವರೆಯುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ನಲ್ಲಿ ಸಾಕಷ್ಟು ಕ್ರಿಯಾಶೀಲ ನಾಯಕರಿದ್ದಾರೆ. ಕೆಪಿಸಿ ಸದಸ್ಯತ್ವ ಸೀಮಿತ ಸಂಖ್ಯೆಯಲ್ಲಿರುವುದರಿಂದ ಕ್ರಿಯಾಶೀಲ ನಾಯಕರಿಗೆ ನನ್ನ ಸ್ಥಾನವನ್ನು ಬಿಟ್ಟುಕೊಟ್ಟಿದ್ದೇನೆ ಎಂದರು.
ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣರವರು ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಬೇಟಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವ ನಾರಾಯಣ್ ಅವರು, ಪ್ರತಾಪ್ ಚಂದ್ರ ಶೆಟ್ಟಿ ಅವರು ಪಕ್ಷದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದ್ದಾರೆ.











