ಕುಂದಾಪುರ ಮಿರರ್ ಸುದ್ದಿ…
ಕೋಟ: ಭಾರತೀಯ ಜನತಾ ಪಾರ್ಟಿ ಈ ದೇಶದ ಉನ್ನತಿಗೆ ಶ್ರಮಿಸುವ ಜೊತೆಗೆ ಜನಸಾಮಾನ್ಯರ ಸಮಸ್ಯೆಗೆ ಸದಾ ಸ್ಪಂದಿಸುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಕೋಟತಟ್ಟು ಪರಿಸರದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ನೇತ್ರತ್ವದಲ್ಲಿ ಸದೃಢವಾದ ಆಡಳಿತ ನೀಡುತ್ತಿದೆ. ಇಂತಹ ನಾಯಕತ್ವದ ಮೂಲಕ ವಿಜಯ ಸಂಕಲ್ಪಕ್ಕೆ ಮುನ್ನುಡಿ ಬರೆಯುತ್ತಿದ್ದೇವೆ. ಬಿಜೆಪಿ ಕಾರ್ಯಕರ್ತರ ಉತ್ಸಾಹ ಮತ್ತಷ್ಟು ಇಮ್ಮಡಿಗೊಳಿಸಿದೆ. ಮನೆ ಮನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಯನ್ನು ಹಾಗೇ ಸ್ಥಳೀಯ ಶಾಸಕರ ಜನಪರ ಕಾಳಜಿ ಕಾರ್ಯಗಳು ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕೋಟತಟ್ಟು ಪರಿಸರದ ವಿಶ್ವನಾಥ ತುಂಗರ ಮನೆಗೆ ಮೂಲಕ ಬಿಜೆಪಿ ಸರಕಾರದ ಸಾಧನಾ ಪತ್ರ ವಿತರಿಸಿದರು.ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಚಿವರೊಂದಿಗೆ ಸಂಕಲ್ಪ ಅಭಿಯಾನಕ್ಕೆ ಸಾಥ್ ನೀಡಿದರು.
ರಾಜ್ಯದ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಪ್ರದಾನಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರದಾನಕಾರ್ಯದರ್ಶಿ ಸುರೇಶ್ ಶೆಟ್ಟಿ,ಸತೀಶ್ ಪೂಜಾರಿ ವಕ್ವಾಡಿ, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ,ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್,ಮಾಜಿ ತಾ.ಪಂ ಸದಸ್ಯೆ ಲಲಿತಾ ಪೂಜಾರಿ, ಕೊಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ, ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ,ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರದಾನಕಾರ್ಯದರ್ಶಿ ಅಜಿತ್ ಶೆಟ್ಡಿ ಕೊತ್ತಾಡಿ, ಶಕ್ತಿ ಕೇಂದ್ರ ಅಧ್ಯಕ್ಷ ಪ್ರಮೋದ್ ಹಂದೆ,ಕೋಟತಟ್ಟು ವಾರ್ಡ ಒಂದರ ಪೇಜ್ ಪ್ರಮುಖ್ ರವಿ ಕುಂದರ್, ಕುಂದಾಪುರ ಮಂಡಲದ ವಿಜಯ ಸಂಕಲ್ಪ ಅಭಿಯಾನದ ಸಂಚಾಲಕಿ ವಿದ್ಯಾ ಸಾಲಿಯಾನ್, ಕುಂದಾಪುರ ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಕೋಟತಟ್ಟು ಗ್ರಾ.ಪಂ ಉಪಾಧ್ಯಕ್ಷ ವಾಸು ಪೂಜಾರಿ, ಮಾಜಿ ಅಧ್ಯಕ್ಷರು,ಸದಸ್ಯರು,ಪ್ರಸ್ತುತ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕುಂದಾಪುರ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸತೀಶ್ ಕುಂದರ್ ಸ್ವಾಗತಿಸಿ ನಿರೂಪಿಸಿದರು.











