ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ರಜತ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ಎಂಬ ಶೀರ್ಷಿಕೆಯಡಿ ಪ್ರತಿ ತಿಂಗಳು ಓರ್ವ ಸಾಧಕರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದರಂತೆ ಈ ಬಾರಿ ಸಮಾಜಸೇವಕ ಈಶ್ವರ್ ಮಲ್ಪೆ ಇವರಿಗೆ ರಜತ ಗೌರವ ನೀಡಲಿದೆ.
ಕೋಟ ರಾಜಶೇಖರ ದೇವಳದ ಸನ್ನಿದಾನದಲ್ಲಿ ಜ.28ರ ಸಂಜೆ 6.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೋಟ ಅಮೃತೇಶ್ವರಿ ದೇವಳದ ಅಧ್ಯಕ್ಷ ಆನಂದ್ ಸಿ ಕುಂದರ್ ಸಮ್ಮುಖದಲ್ಲಿ ಗೌರವ ಪ್ರದಾನ ಮಾಡಲಿದೆ. ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸಾಲಿಗ್ರಾಮ, ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ,ಸಮಾಜಸೇವಕ ಬಡಾಮನೆ ರತ್ನಾಕರ ಶೆಟ್ಟಿ ,ಮತ್ತಿತರ ಗಣ್ಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೆರವೆರಲಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











