ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ತೆಕ್ಕಟ್ಟೆ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್ ಸಂಖ್ಯೆ 182 ರಲ್ಲಿ ಇಂದು ಕೇಂದ್ರ ಸಚಿವೆ, ಉಡುಪಿ ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಅವರು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಬೂತ್ ಅಧ್ಯಕ್ಷರ ಮನೆ ಮತ್ತು ಬೂತ್ ನ ಹತ್ತಾರು ಮನೆಗಳನ್ನು ಸಂಪರ್ಕಿಸಿ ಗೋಡೆ ಬರಹ ಹಾಗೂ ಪಕ್ಷದ ಸ್ಟಿಕರ್ ಅಳವಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆ ಮತ್ತು ಸಾಧನೆಗಳ ಕುರಿತು ಮಾಹಿತಿ ನೀಡಿ ಬೂತ್ ವಿಜಯ ಸಂಕಲ್ಪ ಅಭಿಯಾನ ನೆರವೇರಿಸಿದರು.

ನಂತರ ಮಾತನಾಡಿದ ಅವರು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರತಿ ಬೂತ್ ನಲ್ಲು ಈ ಕಾರ್ಯಕ್ರಮ ನಡೆಯುತ್ತಿದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮತ್ತು ಸ್ಥಳೀಯ ಶಾಸಕರ ಸಾಧನೆಗಳ ಸಮಗ್ರ ಮಾಹಿತಿ ಇರುವ ಕರಪತ್ರವನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ತಿಳಿಸಬೇಕು ಆ ಮೂಲಕ ಪ್ರತಿ ಬೂತ್ ಗಳಲ್ಲೂ ಅತೀ ಹೆಚ್ಚು ಮತಗಳ ಅಂತರ ಪಡೆಯಬೇಕು, ರಾಜ್ಯದಲ್ಲಿ ಇನ್ನೊಮ್ಮೆ ಬಿಜೆಪಿ ಸರ್ಕಾರವನ್ನು ಪ್ರಚಂಡ ಬಹುಮತದೊಂದಿಗೆ ಆರಿಸಬೇಕು ಮತ್ತು ಕಾರ್ಯಕರ್ತರು ಪ್ರತಿ ಮನೆ ಸಂಪರ್ಕಿಸುವುದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ಕುರಿತಾಗಿ ಹೆಚ್ಚು ಪ್ರಚಾರ ನೀಡಬೇಕು ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕುಂದಾಪುರ ಮಂಡಲ ಪ್ರಭಾರಿ ಸುಪ್ರಸಾದ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ, ಸುರೇಶ್ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷ ಕಿರಣ್ ಪೂಜಾರಿ, ಬೂತ್ ಅಧ್ಯಕ್ಷ ಶ್ರೀನಾಥ್ ಶೆಟ್ಟಿ, ಅಭಿಯಾನದ ಮಂಡಲ ಪ್ರಮುಖರಾದ ಸುರೇಂದ್ರ ಕಾಂಚನ್, ವಿದ್ಯಾ ಸಾಲಿಯಾನ್, ವಿವಿಧ ಮೋರ್ಚಾ, ಪ್ರಕೋಷ್ಠ, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಪದಾಧಿಕಾರಿಗಳು, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಕಾರ್ಯಕರ್ತರು ಉಪ್ಥಿತರಿದ್ದರು.











