ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :2023 ರ ವಿಧಾನಸಭಾ ಚುನಾವಣೆಯ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರವರು ಫೆಬ್ರವರಿ 20 ರಂದು ಉಡುಪಿ ಜಿಲ್ಲೆಗೆ ಆಗಮಿಸಿ, ಬೆಳಿಗ್ಗೆ 10ಗಂಟೆಗೆ ಸರಿಯಾಗಿ ಜಿಲ್ಲಾ ಬೂತ್ ಸಮಿತಿ ಸಮಾವೇಶದಲ್ಲಿ ಭಾಗವಹಿಸಲಿದ್ದು ಆ ನಿಟ್ಟಿನಲ್ಲಿ ಕುಂದಾಪುರ ಮಂಡಲದಿಂದ ಕಾರ್ಯಕರ್ತರು ಪಾಲ್ಗೊಳ್ಳುವ ಸಲುವಾಗಿ ಇಂದು ಮಂಡಲ ಕಚೇರಿಯಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ
ಸಭೆ ನಡೆಯಿತು.
ಕುಂದಾಪುರ ಮಂಡಲ ಚುನಾವಣಾ ಪ್ರಭಾರಿ ಶ್ಯಾಮಲಾ ಕುಂದರ್ ಮಾತನಾಡಿ ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಮಂಡಲದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಬೇಕು, ಚುನಾವಣಾ ದೃಷ್ಟಿಯಿಂದಲೇ ಫೆಬ್ರವರಿ 20 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಉಡುಪಿಗೆ ಆಗಮಿಸಿ ಜಿಲ್ಲಾ ಬೂತ್ ಸಮಿತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ, ಕುಂದಾಪುರ ಮಂಡಲದ 222 ಬೂತ್ ಗಳಿಂದ ಬೂತ್ ಸಮಿತಿಯ ಎಲ್ಲಾ ಸದಸ್ಯರು ಕಡ್ಡಾಯವಾಗಿ ಪಾಲ್ಗೊಂಡು ಕಾರ್ಯಕ್ರಮ ಯಶ್ವಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ನಿಕಟಪೂರ್ವ ಮಂಡಲ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಹಾಗೂ ಸತೀಶ್ ಪೂಜಾರಿ, ಮಂಡಲ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ, ವಿವಿಧ ಮೋರ್ಚಾ, ಪ್ರಕೋಷ್ಠಗಳ ಅಧ್ಯಕ್ಷರು ಪ್ರಧಾನಕಾರ್ಯದರ್ಶಿಗಳು, ಬೂತ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.











