ಕಲಾವಿದ ಬಿಜೂರು ಚಂದ್ರ ಶೆಟ್ಟಿ ಅವರಿಗೆ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ ಪ್ರದಾನ

0
346

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ವಂಡ್ಸೆಯ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವದ ಸಂದರ್ಭದಲ್ಲಿ ದೇವಸ್ಥಾನದ ಆಶ್ರಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ವಂಡ್ಸೆ ನಾರಾಯಣ ಗಾಣಿಗರ ಸ್ಮರಣಾರ್ಥ ಅವರ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ‘ವಂಡ್ಸೆ ನಾರಾಯಣ ಪ್ರಶಸ್ತಿ-2023’ ಪ್ರಶಸ್ತಿ ಪ್ರದಾನ ನಡೆಯಿತು.

Click Here

ಬಡಗುತಿಟ್ಟಿನ ಪ್ರತಿಭಾನ್ವಿತ ಸ್ತ್ರೀ ವೇಷ ಕಲಾವಿದ, ಪ್ರಸ್ತುತ ಮಾರಣಕಟ್ಟೆ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಜೂರು ಚಂದ್ರ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಂಬೈಯ ಹಿರಿಯ ಯಕ್ಷಗಾನ ಕಲಾಪೋಷಕರು ಹಾಗೂ ಯಕ್ಷಗುರುಗಳಾದ ದೇವಲ್ಕುಂದ ಭಾಸ್ಕರ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಿಳಿಯಾರು ಶ್ರೀಧರ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ ಶೆಟ್ಟಿ, ಉದ್ಯಮಿ ಆನಂದ ಶೆಟ್ಟಿ ಸಬ್ಲಾಡಿ, ದಿ|ನಾರಾಯಣ ಗಾಣಿಗರ ಪುತ್ರರಾದ ಚಂದ್ರ ಗಾಣಿಗ, ಉದಯ ಗಾಣಿಗ ಉಪಸ್ಥಿತರಿದ್ದರು

ಆಲೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ವಂಡ್ಸೆ ಕಾರ್ಯಕ್ರಮ ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here