ಉಡುಪಿ: ಕೇಂದ್ರೀಯ ವಿದ್ಯಾಲಯಕ್ಕೆ 26 ಕೋಟಿ ರೂಗಳ ಸ್ವಂತ ಕಟ್ಟಡ – ಶೋಭಾ ಕರಂದ್ಲಾಜೆ

0
247

Click Here

Click Here

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಇಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಸಿಬ್ಬಂದಿ ವಸತಿ ನಿಲಯಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು ರೂ.26.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಈ ಭಾಗದ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

Click Here

ಈಗ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ನಡೆಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಸಿಬ್ಬಂದಿ ವಸತಿ ಕಟ್ಟಡಗಳ ಅವಶ್ಯಕತೆ ಬಗ್ಗೆ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ರವರಲ್ಲಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆ ಅನುದಾನ ಮಂಜೂರು ಮಾಡಿದೆ ಎಂದಿದ್ದಾರೆ
ಒಂದರಿಂದ ಹತ್ತನೆಯ ತರಗತಿಗಳಿಗೆ ತಲಾ ಎರಡು ವಿಭಾಗಗಳುಳ್ಳ ತರಗತಿ ಕೊಠಡಿಗಳು ಮತ್ತು ಒಂಬತ್ತು ಸಿಬ್ಬಂದಿ ವಸತಿಗಳ ಕಟ್ಟಡದ ನಿರ್ಮಾಣಕ್ಕೆ ಈಗಾಗಲೇ ಟೆಂಡರ ಅನುಮೋದನೆಯಾಗಿದ್ದು, ಅತೀ ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭವಾಗಲಿದೆಯೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತು ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಗೆ ಸಚಿವೆ ಶೋಭಾ ಕರಂದ್ಲಾಜೆ ಅಭಿನಂದನೆ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here