ಕುಂದಾಪುರ ಮಿರರ್ ಸುದ್ದಿ…
ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟ ಘಟಕ ಹಾಗೂ ಮಹಿಳಾ ಘಟಕದ ಡಾ.ಜಿಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು, ಕೆ.ಎಂ.ಸಿ ಮಣಿಪಾಲ ನೇತ್ರತ್ವದಲ್ಲಿ ಕೋಟ ಗ್ರಾಮಪಂಚಾಯತ್, ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಘಟಕ ಕೋಟ, ಬಾರಿಕೆರೆ ಯುವಕ ಮಂಡಲ ಕೋಟ, ಅರಮವಿಜಯ ಸ್ಪೋಟ್ರ್ಸ್ ಅಂಡ್ ಕಲ್ಚರ್ ಕ್ಲಬ್ ಪಡುಕರೆ, ಅಮೃತ ಯುವಕ ಸಂಘ ಕದ್ರಿಕಟ್ಟು ಕೋಟ ಇವರ ಸಹಯೋಗದೊಂದಿಗೆ ಇದೇ ಬರುವ ಮಾ.12ರಂದು ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜಿಸಲಾಗಿದೆ.
ರಕ್ತದಾನ ನೀಡಲಿಚ್ಛಿಸುವವರು ಅದೇ ದಿನ ಪೂರ್ವಾಹ್ನ 8.30ರಿಂದ2.00ಗ ವರಗೆ ಆಗಮಿಸಿ ನೊಂದಾಯಿಸಿ ರಕ್ತದಾನ ನೀಡಬಹುದಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.











