ಕುಂದಾಪುರ ಮಿರರ್ ಸುದ್ದಿ…
ಕೋಟ: ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ಇದರ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆ ಮಾ.೧೧ರಂದು ಸಂಜೆ ೫ಗಂಟೆಗೆ ಸಾಲಿಗ್ರಾಮದ ಬಯಲು ರಂಗಮಂದಿರದಲ್ಲಿ ಜರಗಲಿದೆ ಎಂದು ಸಂಸ್ಥೆಯ ನಿಯೋಜಿತ ಅಧ್ಯಕ್ಷ ಶ್ಯಾಮ್‌ಸುಂದರ್ ನಾರಿ ಅವರು ಮಾ.೯ರಂದು ಸಾಲಿಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಾ| ಶಂಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕುಂದಾಪುರ ಉಪ ವಿಭಾಗಾಽಕಾರಿ ರಶ್ಮಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಸಾಲಿಗ್ರಾಮ ದೇಗುಲದ ಅಧ್ಯಕ್ಷ ಡಾ|ಕೆ.ಎಸ್.ಕಾರಂತ್, ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ ಮೊದಲಾದವರು ಉಪಸ್ಥಿತರಿರುವರು, ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ಶ್ಯಾಮ್‌ಸುಂದರ್ ನಾರಿ, ಪ್ರಧಾನ ಕಾರ್ಯದರ್ಶಿಯಾಗಿ ದೇವೇಂದ್ರ ಸುವರ್ಣ ಅಽಕಾರ ಸ್ವೀಕರಿಸಲಿದ್ದಾರೆ ಎಂದರು. ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ ೧೦ಗಂಟೆಯಿಂದ ೩ಗಂಟೆ ತನಕ ಆರೋಗ್ಯ ತಪಾಸಣೆ ಉಚಿತ ಶಿಬಿರ ಜರಗಲಿದೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಾ| ಶಂಕರ್ ಶೆಟ್ಟಿ, ಜಿಲ್ಲಾ ಪದಾಽಕಾರಿಗಳಾದ ಅಶೋಕ್ ಪೂಜಾರಿ ಸಾಲಿಗ್ರಾಮ, ಮಾಧವ ಕಾರ್ಕಡ, ಗಣೇಶ್ ತಿಂಗಳಾಯ, ದೇವೇಂದ್ರ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.











