ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ – ಸನ್ಮಾನ ಕಾರ್ಯಕ್ರಮ

0
891

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಎಲ್ಲಾ ವೃತ್ತಿಗಳಿಗಿಂತ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಅದೆಷ್ಟೆ ಜನರಿದ್ದರೂ ಕೂಡ ನನಗೆ ಕಲಿಸಿದ ಶಿಕ್ಷಕರು ಎದುರಿಗೆ ಬಂದರೆ ಅವರ ಕಾಲಿಗೆರಗುತ್ತೇನೆ. ಶಿಕ್ಷಕರೆಂದರೆ ನನಗೆ ಅಪಾರ ಗೌರವ. ತಂದೆ ತಾಯಿಗೆ ಮೂರು ಮಕ್ಕಳಿದ್ದರೆ ಯಾವ ಮಗು ಬುದ್ಧಿವಂತ ಎಂದು ಗುರುತಿಸುವುದು ಕಷ್ಟ ಆಗಬಹುದು. ಆದರೆ ತರಗತಿಯಲ್ಲಿ ಸಾವಿರ ವಿದ್ಯಾರ್ಥಿಗಳಿದ್ದರೂ ಕೂಡ ಪ್ರತಿ ಮಗುವಿನ ಸಾಮರ್ಥ್ಯವನ್ನು ಅಧ್ಯಾಪಕರು ಗುರುತಿಸುವಲ್ಲಿ ಸಫಲರಾಗುತ್ತಾರೆ.
ಕರೋನಾ ಕಾರಣದಿಂದಾಗಿ ಹದಗೆಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ‌ ಬದುಕನ್ನು ಕಟ್ಟುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಮತ್ತು ಬೈಂದೂರು ವಿಧಾಸಸಭಾ ಕ್ಷೇತ್ರದ ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಹೇಳಿದರು.

ಅವರು ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕ್ಷೇಮಪಾಲನಾ ಸಮಿತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ದೇಶ ಕಂಡ ಶ್ರೇಷ್ಠ ಶಿಕ್ಷಕ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಕಾಳಾವರ ಉದಯ ಕುಮಾರ್ ಶೆಟ್ಟಿಯವರನ್ನು ಸಮ್ಮಾನಿಸಿ ಗೌರವಿಸಿಲಾಯಿತು.‌ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈಗಿನ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಬಂದ ರೀತಿ ಮತ್ತು ಅವರ ಮುಂದಿನ ಕಲಿಕೆಯ ಬಗ್ಗೆ ಮನೋಜ್ಞವಾಗಿ ತಿಳಿಸಿಕೊಟ್ಟರು.

Click Here

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿಯವರು ಮಾತನಾಡಿ, ಹೊಸ ಶಿಕ್ಷಣ ನೀತಿಯ ಸವಾಲುಗಳು, ಅದಕ್ಕೆ ಸರಿಸಾಟಿಯಾಗಿ ಹೊಂದಿಕೊಳ್ಳಬೇಕಾದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪಾತ್ರವನ್ನು ವಿವರಿಸಿದರು.

ಉಪಪ್ರಾಂಶುಪಾಲರಾದ ಕೋವಾಡಿ ಚೇತನ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು ಮತ್ತು ಸನ್ಮಾನಿತರನ್ನು ಸಭೆಗೆ ಪರಿಚಯಿಸಿದರು.

ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ನಿರೂಪಿಸಿ, ವಿದ್ಯಾರ್ಥಿಗಳ ಕ್ಷೇಮಪಾಲನಾ ಸಮಿತಿಯ ಸಂಯೋಜಕ ಶಿವರಾಜ್ ಅರೆಹೊಳೆ ವಂದಿಸಿದರು.‌ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಪ್ರಾರ್ಥನೆಗೈದರು . ಸಂಸ್ಥೆಯ ಬೋಧಕ ಮತ್ತು ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here