ಮಾ.23 ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

0
467

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ : ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾರ್ಚ್ 23 ರಂದು ಮಧ್ಯಾಹ್ನ 2.30 ಕ್ಕೆ ಬ್ರಹ್ಮಾವರದಲ್ಲಿ ನಡೆಯಲಿದೆ.

Click Here

ಕಟ್ಟಡದ ಉದ್ಘಾಟನೆಯನ್ನು ಕಂದಾಯ ಸಚಿವ ಆರ್ ಅಶೋಕ್ ನೆರವೇರಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ ಸೋಮಣ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್, ವಸತಿ ಇಲಾಖೆಯ ಕಾರ್ಯದರ್ಶಿ ಡಾ. ರವಿಶಂಕರ್ ಜೆ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ ಪ್ರಕಾಶ್, ಕರ್ನಾಟಕ ಗೃಹ ಮಂಡಳಿ ಆಯುಕ್ತೆ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಕರ್ನಾಟಕ ಗೃಹ ಮಂಡಳಿ ಮುಖ್ಯ ಅಭಿಯಂತರ ಶರಣಪ್ಪ ಸುಲಗಂಟೆ, ಕರ್ನಾಟಕ ಗೃಹ ಮಂಡಳಿ ಕಾರ್ಯದರ್ಶಿ ಸಿದ್ದಲಿಂಗಪ್ಪ ಎನ್ ಆರ್ ಹಾಗೂ ಮತ್ತಿತರರು ಭಾಗವಹಿಸಲಿರುವರು.

Click Here

LEAVE A REPLY

Please enter your comment!
Please enter your name here