ಕೋಟ – ಲಲಿತಾ ಪೂಜಾರಿ ಕೊರವಡಿ ಇವರಿಗೆ ಪಂಚವರ್ಣ ರಜತ ಗೌರವ ಪ್ರದಾನ

0
567

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಅಂಗ ನ್ಯೂನತೆಯ ದೇಹಕ್ಕೆ ಹೊರತು ಮನಸ್ಸಿಗಲ್ಲ ಇದನ್ನು ಲಲಿತಾ ಪೂಜಾರಿ ಕಲಾ ಪ್ರಕಾರಗಳಿಗೆ ಜೀವ ತುಂಬಿ ಈ ಜಗತ್ತಿಗೆ ತೋರಿಸಿ ಕೊಟ್ಟಿದ್ದಾಳೆ ಎಂದು ಬೀಜಾಡಿ ಜಿ.ಪಂ. ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.

ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ಆಶ್ರಯದಲ್ಲಿ ಬೆಳ್ಳಿ ಹಬ್ಬದ ಅಂಗವಾಗಿ ಸಾಧಕರನ್ನು ಗುರುತಿಸಿ ಗೌರವಿಸುವ ರಜತ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ವಿಶೇಷಚೇತನರಾಗಿ ಕಲಾಪ್ರಕಾರಗಳಿಗೆ ಜೀವ ತುಂಬುವ ಕಲಾಮಾತೆ ಲಲಿತಾ ಪೂಜಾರಿ ಕೊರವಡಿ ಇವರಿಗೆ ಪಂಚವರ್ಣ ರಜತ ಗೌರವ ನೀಡಿ ಪುರಸ್ಕರಿಸಿ ಮಾತನಾಡಿ ಪ್ರತಿಯೊಬ್ಬರಿಗೂ ಜೀವನದಲ್ಲಿ ಗುರಿ ಇರಬೇಕು ಆ ಗುರಿಯೇ ಮುಂದಿನಯಶಸ್ಸಿಗೆ ಪ್ರೇರಣೆಯಾಗುತ್ತದೆ. ಇಂಥಹ ಪ್ರತಿಭೆಯನ್ನು ಗುರುತಿಸಿ ಗೌರವಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ. ಪಂಚವರ್ಣದ ಸಮಾಜಮುಖಿ ಕಾರ್ಯದ ನಡುವೆ ಸಾಧಕರನ್ನು ಗೌರವಿಸುವ ಮಹತ್ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.

Click Here

ಈ ಸಂದರ್ಭದಲ್ಲಿ ಲಲಿತಾ ಪೂಜಾರಿ ಇವರಿಗೆ ಬೀಜಾಡಿ ಜಿ.ಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ರಜತ ಗೌರವದ ಜೊತೆ ನಗದು, ಪ್ರಶಸ್ತಿ ಪತ್ರ ನೀಡಿ ಪ್ರದಾನಿಸಿದರು.

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕುಂಭಾಶಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ವೇತ ಉಪಾಧ್ಯ ,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಹಂದಟ್ಟು ಮಹಿಳಾ ಬಳಗದ ಸಂಯೋಜಕಿ ಶಕೀಲ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ಇದ್ದರು.ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಪಂಚವರ್ಣದ ಸಾಂಸ್ಕೃತಿಕ ಕಾರ್ಯದರ್ಶಿ ಶಶಿಧರ ತಿಂಗಳಾಯ ವಂದಿಸಿದರು.

Click Here

LEAVE A REPLY

Please enter your comment!
Please enter your name here