ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ರೈತರು ತಾವು ಬೆಳೆದ ಬೆಳೆಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಟಿಎಪಿಸಿಎಂಎಸ್ ಸ್ವಂತ ನಿಧಿಯಿಂದ ನಿರ್ಮಿಸಿಕೊಟ್ಟಿರುವ ರೈತರ ತರಕಾರಿ ಮಾರುಕಟ್ಟೆ ಬೆಳೆಯುತ್ತಿರುವ ಕುಂದಾಪುರ ಪಟ್ಟಣಕ್ಕೆ ಅತ್ಯುತ್ತಮ ಕೊಡುಗೆ. ರೈತರು ಇದರ ಸಂಪೂರ್ಣ ಪ್ರಯೋಜನ ಪಡೆಯಬೇಕು ಎಂದು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ನುಡಿದರು.
ಸೋಮವಾರ ಇಲ್ಲಿನ ಸಂಗಮ್ ಜಂಕ್ಷನ್‍ನಲ್ಲಿ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ(ಟಿಎಪಿಸಿಎಂಎಸ್) ರೂ.14ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ರೈತರ ತರಕಾರಿ ಮಾರುಕಟ್ಟೆ ಪ್ರಾಂಗಣ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್‍ಕುಮಾರ ದೀಪ ಬೆಳಗಿಸಿ ಶುಭಹಾರೈಸಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿ ಸಂಸ್ಥೆಯ ವಜ್ರಮಹೋತ್ಸವ ವರ್ಷಾಚರಣೆಯ ಈ ಹೊತ್ತಲ್ಲಿ ಸಂಗಮ್ ಜಂಕ್ಷನ್‍ನಲ್ಲಿರುವ ಸ್ವಂತ ನಿವೇಶದಲ್ಲಿ ರೈತ ಮಾರುಕಟ್ಟೆ ಸ್ಥಾಪಿಸಿದೆ. ರೈತರು ನೇರವಾಗಿ ಮಾರುಕಟ್ಟೆಗೆ ಆಗಮಿಸಿ ವಹಿವಾಟು ನಡೆಸಬಹುದು ಎಂದರು.
ಟಿಎಪಿಸಿಎಂಎಸ್ ಉಪಾಧ್ಯಕ್ಷ ಶರತ್‍ಕುಮಾರ ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮೊಳಹಳ್ಳಿ ಮಹೇಶ್ ಹೆಗ್ಡೆ, ರಾಜು ಪೂಜಾರಿ ಯಡ್ತರೆ, ಟಿಎಪಿಸಿಎಂಎಸ್ ನಿರ್ದೇಶಕರಾದ ಮಲ್ಯಾಡಿ ಮೋಹನದಾಸ ಶೆಟ್ಟಿ, ಕೆ.ಸುಧಾಕರ ಶೆಟ್ಟಿ ಬಾಂಡ್ಯ, ಆನಂದ ಬಿಲ್ಲವ ಉಪ್ಪಿನಕುದ್ರು, ಕೆ.ಭುಜಂಗ ಶೆಟ್ಟಿ ಕೆರಾಡಿ, ಕೆ.ಮೋಹನ ಪೂಜಾರಿ ಉಪ್ಪುಂದ, ಪ್ರಭಾಕರ ಶೆಟ್ಟಿ ಜಡ್ಕಲ್, ರವಿ ಗಾಣಿಗ ಆಜ್ರಿ, ಎಚ್.ದೀನಪಾಲ ಶೆಟ್ಟಿ ಮೊಳಹಳ್ಳಿ, ಎಸ್.ಜಯರಾಮ ಶೆಟ್ಟಿ ಬೆಳ್ವೆ ಮೊದಲಾದವರು ಉಪಸ್ಥಿತರಿದ್ದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು. ಟಿಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ವಂದಿಸಿದರು.











