ಕುಂದಾಪುರ ಮಿರರ್ ಸುದ್ದಿ…
ನವದೆಹಲಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಯಾವಾಗ ಎನ್ನುವ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ. ರಾಜ್ಯದ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ಕುರಿತು ಮಾಹಿತಿ ನೀಡಿದರು.
ರಾಜ್ಯದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಏಕ ಹಂತದಲ್ಲಿ ಮೇ 10 2023 ರಂದು ಬುಧವಾರ ಮತದಾನ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದೊಂದಿಗೆ ಮೇ 13 ರಂದು ಮತ ಎಣಿಕೆ ನಡೆಯಲಿದೆ.
ರಾಜ್ಯದ 224 ಕ್ಶೇತ್ರಗಳಿಗೆ ಚುನಾವಣೆ ನಡೆಯಲಿದ್ದು , ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಮೇ 24ಕ್ಕೆ ಪ್ರಸಕ್ತ ಸರ್ಕಾರದ ಅಧಿಕಾರವಧಿ ಮುಗಿಯಲಿದೆ.
ವಿಧಾನಸಭೆಯಲ್ಲಿ 224 ಸ್ಥಾನಗಳನ್ನು ಹೊಂದಿರುವ ಕರ್ನಾಟಕವು ಪ್ರಸ್ತುತ ಆಡಳಿತಾರೂಢ ಬಿಜೆಪಿಯು 119 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 75 ಮತ್ತು ಜೆಡಿಎಸ್ 28 ಸ್ಥಾನಗಳನ್ನು ಹೊಂದಿದೆ.
ಕರ್ನಾಟಕದಲ್ಲಿ ಈ ಬಾರಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ, ಈ ಪೈಕಿ 12.15 ಲಕ್ಷ ಯುವ ಮತದಾರರಿದ್ದಾರೆ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.











