ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ನಿಧನಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ

0
778

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್ ಅವರ ನಿಧನಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ.

ಕರಾವಳಿಯ ಸಾಮಾನ್ಯ ಕುಟುಂಬದಲ್ಲಿ ಜನಿಸಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರಾಗಿ ಮೇರು ವ್ಯಕ್ತಿತ್ವ ಹೊಂದಿದ್ದ ಆಸ್ಕರ್ ಫೆರ್ನಾಂಡೀಸ್ ಅವರು ತಮ್ಮ ಸರಳ ಸಜ್ಜನಿಕೆಯ ಮೂಲಕ ದೇಶಾದ್ಯಂತ ಅಪಾರ ಮಂದಿ ಪಕ್ಷಾತೀತ ಅಭಿಮಾನಿಗಳನ್ನು ಹೊಂದಿದ್ದರು.

Click Here

ದಾಖಲೆಯ ಅವಧಿಯಲ್ಲಿ ಸಂಸದರಾಗಿ ರಾಷ್ಟ್ರ ಸೇವೆ ಸಲ್ಲಿಸಿದ್ದ ಅವರು, ಸಮಾಜದ ಸಾಮಾನ್ಯ ಜನರನ್ನು ಗುರುತಿಸಿ ಪಕ್ಷದಲ್ಲಿ ಹಾಗೂ ಸಾಮಾಜಿಕ ಸೇವೆಯಲ್ಲಿ ಅವಕಾಶ ನೀಡುವ ದೊಡ್ಡ ಗುಣವನ್ನು ಹೊಂದಿದ್ದರು. ಅವರ ಅಕಾಲಿಕ ನಿಧನ ಕರಾವಳಿ ಜಿಲ್ಲೆ ಹಾಗೂ ಕರ್ನಾಟಕಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here