ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಶ್ರೀ ಮನ್ಮಹಾರಥೋತ್ಸವ

0
269

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಪುರಾಣ ಹಾಗೂ ಇತಿಹಾಸ ಪ್ರಸಿದ್ದವಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಈಚೆಗೆ ನಡೆದ ಅಷ್ಟಬಂಧ ಹಾಗೂ ಬ್ರಹ್ಮ ಕಲಶೋತ್ಸವದ ನಂತರದ ಧಾರ್ಮಿಕ ವಿಧಿಯ ಅಂಗವಾಗಿ ಶ್ರೀ ಮೂಕಾಂಬಿಕಾ ದೇವಿಯ ವೈಭವದ ಶ್ರೀ ಮನ್ಮಹಾರಥೋತ್ಸವ ಮಂಗಳವಾರ ವೈಭವದಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ತಂತ್ರಿ ನಿತ್ಯಾನಂದ ಅಡಿಗಳ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಬಳಿಕ, ಸಾವಿರಾರು ಭಕ್ತರ ಜಯಘೋಷದ ನಡುವೆ ರಥಾರೋಹಣ ನಡೆಸಲಾಯಿತು. ಸಂಜೆ 5 ಗಂಟೆಯ ಬಳಿಕ ಬ್ರಹ್ಮರಥದಲ್ಲಿ ದೇವರನ್ನು ಕುರಿಸಿ ರಥಬೀದಿಯಲ್ಲಿ ಬ್ರಹ್ಮರಥವನ್ನು ಶಂಕರಾಶ್ರಮದವರೆಗೆ ಕೊಂಡೊಯ್ಯಲಾಯಿತು.

ದೇವಸ್ಥಾನದ ತಂತ್ರಿ ನಿತ್ಯಾನಂದ ಅಡಿಗರ ನೇತೃತ್ವದಲ್ಲಿ ಪೂಜಾ ವಿಧಾನಗಳು ನಡೆಯಿತು ಹಿರಿಯ ಖುತ್ವೀಜರಾದ ಕೆ.ಎನ್.ನರಸಿಂಹ‌ ಅಡಿಗ, ಶ್ರೀಧರ ಅಡಿಗ, ಕೆ.ಎನ್.ಗೋವಿಂದ ಅಡಿಗ, ಕೆ.ರಾಮಚಂದ್ರ, ಸುಬ್ರಹ್ಮಣ್ಯ ಅಡಿಗ, ವಿಘ್ನೇಶ್ ಅಡಿಗ‌, ರಾಮಕೃಷ್ಣ ಜೋಯಿಸ ಹಾಗೂ ಕ್ಷೇತ್ರ ಪುರೋಹಿತರು ಪೂಜಾ ವಿಧಿಗಳಲ್ಲಿ ಭಾಗಿಯಾಗಿದ್ದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಕೆರಾಡಿ, ಕಾರ್ಯನಿರ್ವಹಣಾಧಿಕಾರಿ ಎಸ್‌.ಸಿ.ಕೋಟಾರಗಸ್ತಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ಅತುಲಕುಮಾರ ಶೆಟ್ಟಿ, ಜಯಾನಂದ ಹೋಬಳಿದಾರ್, ಗಣೇಶ್ ಕಿಣಿ ಬೆಳ್ವೆ, ಗೋಪಾಲಕೃಷ್ಣ ನಾಡ, ರತ್ನಾ ರಮೇಶ್ ಕುಂದರ್, ಕೆ.ಪಿ.ಶೇಖರ್, ಸಂಧ್ಯಾ ರಮೇಶ್, ಬ್ರಹ್ಮರಥ ದಾನಿ ಉದ್ಯಮಿ ಸುನೀಲ್ ಆರ್‌ ಶೆಟ್ಟಿ, ವೀರಭದ್ರ ದೇವಸ್ಥಾನದ ನಿರ್ಮಾತೃ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ವಂಡಬಳ್ಳಿ ಜಯರಾಮ್ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಮಕೃಷ್ಣ ಭಟ್ ಇದ್ದರು.

Click Here

LEAVE A REPLY

Please enter your comment!
Please enter your name here