ಕುಂದಾಪುರ :ಶಾಸಕ ಸುಕುಮಾರ್ ಶೆಟ್ಟಿ ಪಕ್ಷದಿಂದ ಉಚ್ಛಾಟನೆ!? ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ಧಿ ಹರಡಿದ ಕಿಡಿಗೇಡಿ

0
759

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿಯವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದೆ ಎಂಬ ಸುದ್ಧಿ ಯೊಂದನ್ನು ಹರಿಯಬಿಟ್ಟಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.

ಬಿಜೆಪಿಯ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರ ನಕಲಿ ಸಹಿ ಇರುವ ಉಚ್ಚಾಟನಾ ಪತ್ರವಾಗಿದ್ದು, ಬಿಜೆಪಿಯಲ್ಲಿದ್ದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿರುವ ಬಗ್ಗೆ ದಾಖಲೆ ಲಭಿಸಿದ್ದು, ಪಕ್ಷ ವಿರೋಧಿ ಚಟುವಟಿಕೆಗಾಗಿ ಉಚ್ಚಾಟಿಸಲಾಗಿದೆ ಎಂದು ಬರೆಯಲಾಗಿತ್ತು.

Click Here

ಈ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದ ವಿಷಯ, ಇಂತಹ ಯಾವುದೇ ರೀತಿಯ ಬೆಳವಣಿಗೆ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ಧಿಯನ್ನು ನಂಬಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸುಕುಮಾರ್ ಶೆಟ್ಟಿ, ಈ ಬಗ್ಗೆ ಯಾವುದೇ ಬೇಸರವಿಲ್ಲ. ನಾನು ಅಪ್ಪಟ ದೈವ ಭಕ್ತನಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ ಹರಡುವವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Click Here

LEAVE A REPLY

Please enter your comment!
Please enter your name here