ಬಸ್ರೂರು ಶ್ರೀ ಶಾರದಾ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಹಳೆ ವಿದ್ಯಾರ್ಥಿಗಳ ಸಮಾವೇಶ
ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ : ಯಾವುದೇ ಶಿಕ್ಷಣ ಸಂಸ್ಥೆಗಳು ಉನ್ನತಿಯನ್ನು ಕಾಣಬೇಕಾದರೆ ಹಳೆ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ. ಹಳೆ ವಿದ್ಯಾರ್ಥಿಗಳೇ ಶಿಕ್ಷಣ ಸಂಸ್ಥೆಗಳಿಗೆ ಆಧಾರ ಸ್ತಂಭ ಎಂದು ಶ್ರೀ ಶಾರದಾ ಕಾಲೇಜು ಬಸ್ರೂರು ಸಂಚಾಲಕ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.
ಅವರು ಬಸ್ರೂರು ಶ್ರೀ ಶಾರದಾ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ನವೀಕೃತ ಬಿ.ವೀರರಾಜೇಂದ್ರ ಹಗ್ಡೆ ಸಭಾಂಗಣವನ್ನು ಲೈಫ್ ಲೈನ್ ಫೀಡ್ಸ್(ಇಂಡಿಯಾ) ಪ್ರೈ.ಲಿ.ಚಿಕ್ಕಮಗಳೂರು ಇದರ ಅಧ್ಯಕ್ಷ ಮತ್ತು ವ್ಯವಸ್ಥಾಪನ ನಿರ್ದೇಶಕ ಕೈಲ್ಕೆರೆ ಕಿಶೋರ್ ಕುಮಾರ್ ಹೆಗ್ಡೆ ಉದ್ಘಾಟಿಸಿದರು. ಬೆಂಗಳೂರು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಯ ಅಪರ ನಿರ್ದೇಶಕ ನಾಗರಾಜ ಶೇರಿಗಾರ್ ಶ್ರೀ ಶಾರದ ಸುವರ್ಣ ಸಂಚಿಕೆ ಬಿಡುಗಡೆಗೊಳಿಸಿದರು. ಇದೆ ಸಂದರ್ಭ ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು.
ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ವಿಜಯ ಶೆಟ್ಟಿ ಸಟ್ವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಾನಿ ಕೈಲ್ಕೆರೆ ಕಿಶೋರ್ ಹೆಗ್ಡೆಯವರನ್ನು ಹಾಗೂ ಸುವರ್ಣ ಮಹೋತ್ಸವಕ್ಕೆ ಸಹಕರಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಂಗಳೂರು ಜೆ.ಎಸ್.ಪದವಿ ಮತ್ತು ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಡಾ.ಎಸ್.ಜಯರಾಮ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜಯಶೀಲ ಶೆಟ್ಟಿ, ಕೋಶಾಧಿಕಾರಿ ವಿಜಯಾನಂದ ಶೆಟ್ಟಿ ಹಳ್ನಾಡು, ಶ್ರೀ ಶಾರದಾ ಕಾಲೇಜು ಪ್ರಾಶುಂಪಾಲೆ ಚಂದ್ರಾವತಿ ಶೆಟ್ಟಿ, ಪಿಯು ಕಾಲೇಜಿನ ಪ್ರಾಂಶುಪಾಲ ನಾರಾಯಣ ಪೈ ಮೊದಲಾದವರು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಸ್ವಾಗತಿಸಿದರು. ನಿವೃತ್ರ ಪ್ರಾಶುಂಪಾಲರಾದ ರಾಧಕೃಷ್ಣ ಶೆಟ್ಟಿ ಪ್ರಾಸ್ತಾವಿಸಿದರು. ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪದ್ಮಾ ಹೆಗ್ಡೆ ಪ್ರಾರ್ಥಿಸಿದರು.
ವಿದೂಷಿ ವೈದೇಹಿ ಮತ್ತು ಕಲಾಶ್ರೀ ಪುನಿತ್ ತಂಡದಿಂದ ಸುವರ್ಣ ನಾಟ್ಯ ವೈಭವ, ಪದವಿ ಪೂರ್ವ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.











