Video:
ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದ್ದು, ಶನಿವಾರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಕುಂದಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಕುಂದಾಪುರದ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಕ್ಷದ ಮುಖಂಡರು, ಕಾರ್‍ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಪಕ್ಷದ ನಾಯಕ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ಕುಂದಾಪುರದಲ್ಲಿ ಕಾಂಗ್ರೆಸ್ ಸೋತಿರುವ ಬಗ್ಗೆ ನಾವು ಸಮಾಲೋಚನೆ ಮಾಡಬೇಕಾದ ಅಗತ್ಯವಿದ್ದು, ಆದರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೇರಿದ್ದು, ಇದು ನಮ್ಮೆಲ್ಲರ ಪಾಲಿನ ಸೌಭಾಗ್ಯ. ಇದನ್ನು ಸಂಭ್ರಮಿಸೋಣ. ಚುನಾವಣೆ ವೇಳೆ ಘೋಷಿಸಿದ ಗ್ಯಾರಂಟಿಗಳನ್ನು ಅರ್ಹರಿಗೆ ತಲುಪಿಸುವ ಕಾರ್‍ಯ ಮಾಡೋಣ ಎಂದರು.
ಕಾಂಗ್ರೆಸ್ ಜಿಲ್ಲಾ ವಕ್ತಾರ ವಿಕಾಸ್ ಹೆಗ್ಡೆ ಹಾಗೂ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಂದ್ರಶೇಖರ ಖಾರ್ವಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಮತ್ತಿತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿ ವಿನೋದ್ ಕ್ರಾಸ್ತ ಸ್ವಾಗತಿಸಿ, ನಿರೂಪಿಸಿದರು. ಇಂಟಕ್ ಅಧ್ಯಕ್ಷ ಚಂದ್ರ ಅಮಿನ್ ವಂದಿಸಿದರು.











