ಪರಿಸರದ ಜಾಗೃತಿ ಪ್ರತಿಯೊಬ್ಬರಲ್ಲೂ ಮೂಡಬೇಕು – ಪರಿಸರ ಇಲಾಖಾಧಿಕಾರಿ ಪ್ರಮೀಳಾ

ಕುಂದಾಪುರ ಮಿರರ್ ಸುದ್ದಿ…
ಕೋಟ: ಪರಿಸರದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು ಆ ಮೂಲಕ ಮನೆ ಮನೆಯಲ್ಲಿ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ ಪರಿಸರ ಇಲಾಖೆಯ ಉಪ ಅಧಿಕಾರಿ ಪ್ರಮೀಳಾ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ, ಯಕ್ಷಸೌರಭ ಕಲಾರಂಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಹಯೋಗದೊಂದಿಗೆ 164 ವಾರದ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಸಮಾಜಸೇವಕ ಆನಂದ್ ಸಿ ಕುಂದರ್ 75ನೇ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಒಂದು ತಿಂಗಳ ಕಾಲ ಬೀಚ್ ಸ್ವಚ್ಛತಾ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ ಕಂಡ ಕಂಡಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವ ಕೈಗಳಿಗೆ ಕಡಿವಾಣ ಅತ್ಯವಶ್ಯಕ, ಈ ದಿಸೆಯಲ್ಲಿ ಸ್ಥಳೀಯಾಡಳಿತಗಳು ಕ್ರೀಯಾತ್ವಮಕವಾಗಿ ಕಾರ್ಯನಿರ್ವಹಿಸಿದರೆ ಯಶಸ್ಸು ಪಡೆಯಲು ಸಾಧ್ಯ,ಪರಿಸರದ ಬಗ್ಗೆ ಕಾಳಜಿ ವಹಿಸುವ ಆನಂದ್ ಸಿ ಕುಂದರ್ ಹಾಗೂ ಇಲ್ಲಿನ ಸಂಘಸಂಸ್ಥೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ, ಪರಿಸರ ಸಂರಕ್ಷಿಸುವ ಕಾರ್ಯಕ್ರಮ ಹೆಚ್ಚು ಹೆಚ್ಚು ಪ್ರಚುರಪಡಿಸಬೇಕಾದ ಅಗತ್ಯತೆಯನ್ನು ಒತ್ತಿಹೇಳಿದರು.
ಕಾರ್ಯಕ್ರಮದಲ್ಲಿ ಆನಂದ್ ಸಿ ಕುಂದರ್ ರವರಿಗೆ ಅಭಿನಂದನೆ ಸಲ್ಲಿಸಿ ಬೀಚ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪರಿಸರ ಇಲಾಖೆಯ ಸಹಾಯಕ ಅಧಿಕಾರಿ ಅಮೃತ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಹಂದಟ್ಟು, ಜನತಾ ಸಂಸ್ಥೆಯ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇದರ ಸುಜಾತ ಬಾಯರಿ,ಯಕ್ಷಸೌರಭ ಕಲಾರಂಗದ ಕೋಟ ಅಧ್ಯಕ್ಷ ಪ್ರಶಾಂತ್ ಪಡುಕರೆ ಮತ್ತಿತರರು ಉಪಸ್ಥಿತರಿದ್ದರು.ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.











