ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಗ್ನಿ ಸುರಕ್ಷತೆ ಅರಿವು ಕಾರ್ಯಾಗಾರ

0
219

Click Here

Click Here

ಕುಂದಾಪುರ ಮಿರರ್ ‌ಸುದ್ದಿ…

ಕುಂದಾಪುರ: ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಇಲ್ಲಿನ ಐಕ್ಯೂಎಸಿ, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಶಾಖೆ ಅವರ ಸಹಯೋಗದಲ್ಲಿ ಅಗ್ನಿ ಸುರಕ್ಷತೆ ಅರಿವು ಕಾರ್ಯಕ್ರಮ ನಡೆಯಿತು.

Click Here

ಕೋಣಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಬಾಲಕೃಷ್ಣ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆಯ ಕುರಿತು ಅರಿವು ಮೂಡಿಸಿದರು. ಭಂಡಾರಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎನ್.ಪಿ ನಾರಾಯಣ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಕೃಷ್ಣಾನಂದ. ಟಿ. ಗೌಡ, ಐಆರ್ ಸಿ ಎಸ್ ಕುಂದಾಪುರ ತಾಲೂಕು ಶಾಖೆಯ ಅಧ್ಯಕ್ಷ ಎಸ್. ಜಯಕರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರ ಆಚಾರಿ, ಐಕ್ಯೂಎಸಿ ಸಂಯೋಜಕ ಡಾ. ಕೆ. ಎಮ್. ವಿಜಯ್ ಕುಮಾರ್, ಕಾರ್ಯಕ್ರಮ ಸಂಯೋಜಕ ಕಾಲೇಜಿನ ರೆಡ್ ಕ್ರಾಸ್ ಘಟಕದ ಪ್ರೊ.ಸತ್ಯನಾರಾಯಣ, ಎನ್ಎಸ್ಎಸ್ ಯೋಜನಾಧಿಕಾರಿ ರಾಮಚಂದ್ರ ಆಚಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅರ್ಪಿತಾ ಸ್ವಾಗತಿಸಿ, ವಿದ್ಯಾರ್ಥಿನಿ ಸೊನಾಲಿ ನಿರೂಪಿಸಿ ಮತ್ತು ವಿದ್ಯಾರ್ಥಿ ಪ್ರಜ್ವಲ್ ವಂದಿಸಿದರು.

Click Here

LEAVE A REPLY

Please enter your comment!
Please enter your name here