ಪಾರಂಪಳ್ಳಿಪಡುಕರೆ- ದಡಕ್ಕಪ್ಪಳಿಸಿ ಮೀನುಗಾರಿಕಾ ಬೋಟ್ ಹಾನಿ

0
288

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ :ಇಲ್ಲಿನ ಸಾಲಿಗ್ರಾಮ ಪ.ಪಂ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆ ಕಡಲ ಕಿನಾರೆಯಲ್ಲಿ ಮೀನುಗಾರಿಕೆ ತೆರಳಿದ ಬೋಟ್‍ವೊಂದು ಡದಕ್ಕೆ ಅಪ್ಪಳಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.

Click Here

ಬೆಂಗ್ರೆ ನಿವಾಸಿ ಸಂದೀಪ್ ತೋಳಾರ್ ಮಾಲೀಕತ್ವದ ಶ್ರೀ ದುರ್ಗಾಪರಮೇಶ್ವರಿ ರುಕ್ಮಯ್ಯ ಹೆಸರಿನ ಬೋಟ್‍ನ ಪ್ಯಾನಿಗೆ  ಬಲೆ ಸಿಲುಕಿದ ಪರಿಣಾಮ ಬೋಟ್‍ನ ಇಂಜಿನ್ ಸ್ಥಬದ್ದಗೊಂಡಿತ್ತು.
ಅಕ್ಕಪಕ್ಕದ ಬೋಟ್‍ಗಳು ಸಹಾಯಕ್ಕೆ ಬಂದರೂ ಕೂಡ ಪ್ರಯೋಜನವಾಗದೆ ಗಾಳಿಯ ರಭಸಕ್ಕೆ ದಡಕ್ಕೆ ತೇಲಿಬಂದಿದೆ.

ಬೋಟಿನಲ್ಲಿದ್ದ ಕಾರ್ಮಿಕರನ್ನ ಸುರಕ್ಷಿತವಾಗಿ ಬೇರೆ ಬೋಟಿನವರು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾದರು ಎನ್ನಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ
ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳು ಹಾಗೂ ಮೀನುಗಾರಿಕೆ ಪರಿಕರಗಳು ಬೋಟಿನೊಂದಿಗೆ ಮುಳುಗಡೆಯಾಗಿದ್ದು ಸುಮಾರು ಅಂದಾಜು 12 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

Click Here

LEAVE A REPLY

Please enter your comment!
Please enter your name here