ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮೇ 16ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನ (Silver Medal) ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನವನ್ನು(Bronze Medal) ಪಡೆದುಕೊಂಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ತರಬೇತಿ ನೀಡಿದ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್‍ನ ನರೇಶ್ ಬಿ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.











