ಕುಂದಾಪುರ ಮಿರರ್ ಸುದ್ದಿ…

ಕೋಟ : ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ ಗೆ ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಪೂರ್ಣಿಮಾ ಹಾಗೂ ಸದಸ್ಯರಾದ ಜಯಲಕ್ಷ್ಮೀ ಶೆಟ್ಟಿ ಭೇಟಿ ನೀಡಿ ವೀಕ್ಷಿಸಿದರು. ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ಕಿರು ಸಭಾಂಗಣ, ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರಂತರ ಬದುಕು ಬರಹವನ್ನು ಮುಂದಿನ ಜನಾಂಗಕ್ಕೆ ರವಾನಿಸುವ ಉದ್ದೇಶದಿಂದ ಸ್ಥಾಪಿತವಾದ ಥೀಮ್ ಪಾರ್ಕ್‍ನಲ್ಲಿ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಪೂರಕವಾಗಿ ನಡೆಸುತ್ತಿರುವ ಚಟುವಟಿಕೆಗಳು ಶ್ಲಾಘನೀಯ ಎಂದು ಉಪಮೇಯರ್ ಶ್ರೀಮತಿ ಪೂರ್ಣಿಮಾ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.











