ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶದ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕರು ಹೊಸ ಶೈಕ್ಷಣಿಕ ವರ್ಷದ ಆರಂಭೋತ್ಸವಕ್ಕೆ ಉತ್ತಮ ತಯಾರಿ ನಡೆಸಿದ್ದು, ಯೋಜನೆಯಂತೆ ಎಸ್ ಡಿ ಎಂ ಸಿ, ಗ್ರಾಮ ಪಂಚಾಯಿತಿ ಸದಸ್ಯರ ಉಪಸ್ಥಿತಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಪುಷ್ಪವೃಷ್ಠಿಯೊಂದಿಗೆ ಸ್ವಾಗತಿಸಲಾಯಿತು.
ನಂತರ ನಡೆದ ಸರಳ ಸಮಾರಂಭದಲ್ಲಿ ಮಕ್ಕಳಿಗೆ ಹೊಸ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ನಿತ್ಯಾನಂದ ದೇವಾಡಿಗ ವಹಿಸಿದ್ದರು. ಗ್ರಾಮ ಪಂ. ಸದಸ್ಯರಾದ ಜಯಪ್ರಕಾಶ್ ಶೆಟ್ಟಿಯವರು ಪುಸ್ತಕ ವಿತರಿಸಿ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡುವಂತೆ ತಿಳಿಸಿದರು.
ನಿತ್ಯಾನಂದ ದೇವಾಡಿಗರು ಸಮವಸ್ತ್ರ ವಿತರಣೆ ಮಾಡಿ ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶದ ಬಗ್ಗೆ ಪ್ರಶಂಸಿಸಿ ಅಧ್ಯಾಪಕ ವೃಂದವನ್ನು ಅಭಿನಂದಿಸಿದರು.
ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗರು ವಂದಿಸಿದರು. ಆರಂಭೋತ್ಸವದ ಸವಿನೆನಪಿಗೆ ಮಕ್ಕಳಿಗೆ ಪಾಯಸದ ವ್ಯವಸ್ಥೆ ಮಾಡಲಾಗಿತ್ತು. ಶಿಕ್ಷಕ ರವಿರಾಜ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು.











