ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಂದು ಎಲ್ಲೆಡೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತರಗತಿಗಳ ಆರಂಭಗೊಂಡಿದ್ದು, ವಿದ್ಯಾರ್ಥಿ ಗಳನ್ನು ಆಕರ್ಷಿಸಲು ಶಾಲಾ ಆಡಳಿತ ಸಮಿತಿ ಕಸರತ್ತು ನಡೆಸಿರುವುದು ಕಂಡುಬಂದಿದೆ.
ಕುಂದಾಪುರ ತಾಲೂಕಿನ ಬಸ್ರೂರು ನಿವೇದಿತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬೇಳೂರು ದಿನಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಹೂ ನೀಡಿ ಬರಮಾಡಿಕೊಂಡರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತವಾರಿ ಸಮಿತಿ ಅಧ್ಯಕ್ಷ ಮುಂಬಾರು ದಿನಕರ ಶೆಟ್ಟಿ, ಸದಸ್ಯ ನಾಗರಾಜ ಪೂಜಾರಿ ಹಾಗೂ ಮುಖ್ಯ ಶಿಕ್ಷಕರು, ಎಲ್ಲಾ ಅಧ್ಯಾಪಕರು ಉಪಸ್ಥಿತರಿದ್ದು ಸಹಕರಿಸಿದರು.











