ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆ ಇಲ್ಲಿ ಈ ವರ್ಷದ ಪ್ರಾರಂಭೋತ್ಸವನ್ನು ವಿಶೇಷವಾಗಿ ಆಚರಿಸಿಕೊಳ್ಳಲಾಯಿತು. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಮಣೂರು ಶಾಲೆಯಲ್ಲಿ ಪುಟಾಣಿಗಳಿಂದ ಹಿಡಿದು ಹೈಸ್ಕೂಲ್ ನವರೆಗಿನ ವಿದ್ಯಾರ್ಥಿಗಳು ಸಾಲು ಸಾಲಾಗಿ ನಿಂತು ಬಲೂನ್ ಗಳ ಶೃಂಗಾರದ ನಡುವೆ ಸ್ವಾಗತಿಸಿಕೊಳ್ಳಲಾಯಿತು.
ಶಾಲೆಯ ಮಹಾಪೋಷಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಮಕ್ಕಳಿಗೆ ಸಿಹಿ ತಿಂಡಿ ನೀಡಿ ನಗುವಿನೊಂದಿಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಅಂಕದಕಟ್ಟೆ ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ,ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ, ನಿರಂಜನ್ ನಾಯಕ್, ಪಿಯು ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ, ಉಪನ್ಯಾಸಕ ಸತ್ಯನಾರಾಯಣ ಆಚಾರ್ಯ, ಪ್ರೌಢಶಾಲಾ ಸಹ ಶಿಕ್ಷಕರಾದ ರಾಮದಾಸ್ ನಾಯಕ್, ಶ್ರೀಧರ ಶಾಸ್ತ್ರಿ, ಪ್ರಾಥಮಿಕ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ನಾಗರಾಜ್, ಪ್ರೌಢಶಾಲಾ ವಿಭಾಗದ ಎಸ್‍ಡಿಎಂಸಿ ಅಧ್ಯಕ್ಷ ಜಯರಾಮ ಶೆಟ್ಟಿ , ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.











