ಕುಂದಾಪುರ ಮಿರರ್ ಸುದ್ದಿ…
ಕೋಟ: ಅಧ್ಯಯನಶೀಲತೆ ಮತ್ತು ಶಿಸ್ತು ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಈ ಗುಣಗಳು ಸಹಕಾರಿ”, ಎಂದು ಮಣೂರು ಪಡುಕರೆ ಸರಕಾರಿ ಪದವಿ ಪೂರ್ವ ಕಾಲೇಜು ಶೈಕ್ಷಣಿಕ ಸಮಿತಿಯ ಅಧ್ಯಕ್ಷ ಆನಂದ ಸಿ. ಕುಂದರ್ ಹೇಳಿದರು.
ಕೋಟ ಪಡುಕರೆ ಪದವಿಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಹಾಗೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸುವ ಮೂಲಕ ಶೈಕ್ಷಣಿಕ ವರ್ಷಕ್ಕೆ ಸ್ವಾಗತ ಕೋರಿದರು.
ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಪಡುಕರೆಯ ಪ್ರಾಂಶುಪಾಲರಾದ ಡಾ. ಸುನೀತಾ, ಕಾಲೇಜು ಶೈಕ್ಷಣಿಕ ಸಮಿತಿಯ ಸದಸ್ಯರಾದ ಜಯರಾಮ ಶೆಟ್ಟಿ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯ ನಿರಂಜನ ನಾಯಕ್ ಮುಖ್ಯ ಅತಿಥಿಗಳಾಗಿದ್ದರು.
ಪಿಯು ಪ್ರಾಂಶುಪಾಲ ಡೆನಿಸ್ ಬಾಂಜಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಸತ್ಯನಾರಾಯಣ ಆಚಾರ್ ಕಾರ್ಯಕ್ರಮ ನಿರ್ವಹಿಸಿದರು. ಗೀತಾನಂದ ಫೌಂಡೇಶನ್‍ನ ರವಿಕಿರಣ್ ಸಹಕರಿಸಿದರು. ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.











