ಕುಂದಾಪುರ : ರಾಜ್ಯದಲ್ಲಿ ಗ್ಯಾರಂಟಿ ಅನುಷ್ಟಾನ ಕಾಂಗ್ರೆಸ್ ಹರ್ಷ

0
489

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಅನುಷ್ಟಾನ ಮಾಡಿರುವುದಕ್ಕೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹರ್ಷ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮುಖಂಡರು ಗ್ಯಾರಂಟಿ ಬಗ್ಗೆ ಟೀಕೆ ಮತ್ತು ಲೇವಡಿ ಮಾಡಿ ಗ್ಯಾರಂಟಿಗೆ ವಾರಂಟಿ ಇಲ್ಲ ಮತ್ತು ಗ್ಯಾರಂಟಿ ಪುಸ್ತಕದೊಳಗಿನ ನವಿಲ ಗಿರಿ ಎಂದಿದ್ದರು .

Click Here

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಅನುಷ್ಟಾನ ಪಕ್ಕಾ ಎಂದು ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ತಿಳಿಸಿದಂತೆ ಪ್ರಥಮ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿತ್ತು . ಇಂದು ನೆಡೆದ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳಿಗೆ ಸಂಪೂರ್ಣ ಅನುಮೋದನೆ ನೀಡಲಾಗಿದೆ. ಗ್ಯಾರಂಟಿ ಅನುಮೋದನೆ ಮಾಡಿರುವುದು ಕಾಂಗ್ರೆಸ್ ಪಕ್ಷ ಮಾತು ಮತ್ತು ಕ್ರತಿಗೆ ಹತ್ತಿರ ಇರುವುದು ಮತ್ತು ಬದ್ಧತೆಯನ್ನು ತೋರಿಸುತ್ತದೆ. ಗ್ಯಾರಂಟಿ ಬಗ್ಗೆ ಬೇಕಾಬಿಟ್ಟಿ ಮಾತನಾಡಿದವರು ಈಗ ಉತ್ತರಿಸಬೇಕಾಗಿದೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಜಮಾ ಮಾಡುತ್ತೇವೆ. ವಾರ್ಷಿಕ ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಮತ್ತು ರೈತರ ಆಧಾಯ ದ್ವಿಗುಣ ಮಾಡಲಾಗುವುದು ಎಂದು ನೀಡಿದ ಭರವಸೆ ಈಡೇರಿಸಲಿ ಎನ್ನುವುದು ಕಾಂಗ್ರೆಸ್ ಪಕ್ಷದ ಆಗ್ರಹ .

Click Here

LEAVE A REPLY

Please enter your comment!
Please enter your name here