ಕುಂದಾಪುರ ಮಿರರ್ ಸುದ್ದಿ…
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ – ಪಡುಕರೆ, ಇಲ್ಲಿ ಸೇವೆ ಸಲ್ಲಿಸುತ್ತಿದ್ದ ನಿತ್ಯಾನಂದ ವಿ ಗಾಂವಕರ, ಸಹ ಪ್ರಾಧ್ಯಾಪಕರು, ಆಂಗ್ಲ ಭಾಷಾ ವಿಭಾಗ ಮತ್ತು ಸಹ ಪ್ರಾಧ್ಯಾಪಕ ನಾಗರಾಜ ವೈದ್ಯ ಎಂ.ಇವರು ಇತ್ತೀಚಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮತ್ತು ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ (ಕೋಟೇಶ್ವರ) ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಶ್ರೀಯುತರು ಸಂಸ್ಥೆಗೆ ನೀಡಿದ ಅಮೂಲ್ಯ ಸೇವೆಯನ್ನು ಗುರುತಿಸಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂಧಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಇತ್ತೀಚಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಂಡಿದೆ. ಸನ್ಮಾನ ಸ್ವೀಕರಿಸಿದ ನಿತ್ಯಾನಂದ ವಿ ಗಾಂವಕರ ಹಾಗೂ ನಾಗರಾಜ ವೈದ್ಯ ಎಂ ತಮ್ಮ ಸಂತೋಷವನ್ನು ವೇದಿಕೆಯಲ್ಲಿ ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಪ್ರೊ. ಸುನೀತ ವಿ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕ ಬಿ, ಡಾ. ಸುಬ್ರಮಣ್ಯ. ಎ, ಶ್ರೀ ಮುರಳಿ ಎಂ.ಜಿ, ರಾಜಣ್ಣ ಎಂ, ಪುರುಷೋತ್ತಮ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಡಾ. ಲೀಲಾವತಿ .ಎನ್ ನಿರೂಪಣೆಗೈದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶಂಕರ ನಾಯ್ಕ ಬಿ ಸ್ವಾಗತಿಸಿದರು. ಇತಿಹಾಸ ವಿಭಾಗ ಮುಖ್ಯಸ್ಥ ರಾಜಣ್ಣ ಎಂ ವಂದಿಸಿದರು.











