ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟದ ಕ್ರೀಯಾಶೀಲ ಸಂಸ್ಥೆಯಾದ ಕಳೆದ 25 ವರ್ಷಗಳಿಂದ ಸಾಮಾಜಮುಖಿ ಕಾರ್ಯದಲ್ಲಿ ತೊಡಗಿ ಕೊಂಡ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ಕಛೇರಿ ಕೋಟದ ವರುಣತೀರ್ಥ ಕೆರೆ ಸಮೀಪದಿಂದ ಕೋಟ ಗ್ರಾಮಪಂಚಾಯತ್ ಸನಿಹದ ಪಂಚಾಯತ್ ಕಟ್ಟಡಕ್ಕೆ ಭಾನುವಾರ ಸ್ಥಳಾಂತರಗೊಂಡಿತು.
ಕಛೇರಿಯನ್ನು ಪಾಂಡೇಶ್ಚರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಪಂಚವರ್ಣ ಸಂಸ್ಥೆ ಕ್ರೀಯಾಶೀಲತೆ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.
ಈ ವೇಳೆ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣ ಸಂಸ್ಥೆಯ ಉಪಾಧ್ಯಕ್ಷ ಮನೋಹರ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ನಿರೂಪಿಸಿ ವಂದಿಸಿದರು.











