ಕುಂದಾಪುರ ಮಿರರ್ ಸುದ್ದಿ…
ಕೋಟ: ಸ.ಹಿ.ಪ್ರಾ ಶಾಲೆ ಕೋಟದ ವಿದ್ಯಾರ್ಥಿಗಳಿಗೆ ಕಾಮಧೇನು ವಿವಿಧೋದ್ದೇಶ ಸಹಕಾರ ಸಂಘ ಹಂದಟ್ಟು ಹಾಗೂ ಮಣಿಪಾಲ ಹೌಸಿಂಗ್ ಫೈನಾನ್ಸ್ ಸಿಂಡಿಕೇಟ್ ಲಿಮಿಟೆಡ್ ಇವರುಗಳು ಜಂಟಿಯಾಗಿ ನೀಡಿದ ನೋಟ್ ಬುಕ್ , ಸ್ಕೂಲ್ ಬ್ಯಾಗ್‍ಗಳ ವಿತರಣಾ ಸಮಾರಂಭ ಇತ್ತೀಚಿಗೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಗಣ್ಯರ ಸಮ್ಮುಖದಲ್ಲಿ ನೋಟ್ ಬುಕ್ , ಸ್ಕೂಲ್ ಬ್ಯಾಗ್‍ಗಳ ವಿತರಣೆ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪಶುವೈದ್ಯಾಧಿಕಾರಿ ಡಾ .ಎಸ್. ಮೋಹನ್, ನ್ಯಾಯವಾದಿ ಮಂಜುನಾಥ ಎಸ್ ಕೆ , ಕಾಮಧೇನು ವಿ.ಸ. ಸಂಘದ ಕಾರ್ಯದರ್ಶಿ ಸತೀಶ್ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಮಹಾಲಕ್ಷ್ಮಿ ಸೋಮಯಾಜಿ ,ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ ಹೊಳ್ಳ ಉಪಸ್ಥಿತರಿದ್ದರು.
ಸಹ ಶಿಕ್ಷಕರಾದ ರೋಬಿ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ವಿನಯಕುಮಾರಿ ಸ್ವಾಗತಿಸಿ, ಗೌರವ ಶಿಕ್ಷಕಿ ಶಾರದ ವಂದಿಸಿದರು. ಸಹಶಿಕ್ಷಕಿಯರಾದ ಪುಷ್ಪಲತಾ ಮಾನಸ , ರಂಜಿತಾ ಸಹಕರಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕೊಡುಗೆಯಾಗಿ ನೀಡಿದ ಒಳಾಂಗಣ ಕ್ರೀಡಾ ಸಾಮಗ್ರಿಗಳನ್ನು ಗ್ರಾಮ ಪಂಚಾಯತ್, ಶಾಲಾ ಮುಖ್ಯ ಶಿಕ್ಷಕರಿಗೆ
ಹಸ್ತಾಂತರಿಸಿದರು.











