ಕುಂದಾಪುರ ಮಿರರ್ ಸುದ್ದಿ…
ಕೋಟ: ಸರಕಾರ ರೈತರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವುದನ್ನು ಬಿಟ್ಟು ಬಿಟ್ಟಿ ಭಾಗ್ಯಗಳ ಬಗ್ಗೆ ಹೆಚ್ಚಿನ ಗಮನ ಕೇಂದ್ರೀಕರಿಸಿದೆ ಇದು ವಿಪರ್ಯಾಸದ ಸಂಗತಿ ಎಂದು ಪಾಂಡೇಶ್ಚರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೆಳೆಯರ ಬಳಗ ಕಾರ್ಕಡ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ,ಮಣೂರು ಫ್ರೆಂಡ್ಸ್ ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ 26ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ಕೃಷಿಕನ ಪಾಲು ಮಹತ್ತರವಾದದ್ದು ಅಂತಹ ರೈತರ ಕಲ್ಯಾಣಕ್ಕೆ ಸರಕಾರ ಹೊಸ ಹೊಸ ಯೋಜನೆಗಳ ರೂಪಿಸಬೇಕಾದ ಅಗತ್ಯತೆಗಳನ್ನು ಒತ್ತಿ ಹೇಳಿದರಲ್ಲದೆ ಈ ಬಗ್ಗೆ ಸೂಕ್ತ ಯೋಜನೆ ರೂಪಿಸದಿದ್ದರೆ ಕೃಷಿ ಹಿನ್ನಡೆ ಕಾಣುವುದು ಖಚಿತವಾಗಿದೆ.ಒಂದು ಸಂಘಸಂಸ್ಥೆಗಳು ರೈತರ ಮನೆಬಾಗಿಲಿಗೆ ಹೋಗಿ ಪ್ರೋತ್ಸಾಹ ನೀಡುತ್ತಿದೆ ಆದರೆ ಸರಕಾರಕ್ಕೆ ಈ ಬಗ್ಗೆ ಕಾಳಜಿ ಇಲ್ಲದಿರುವುದು ಶೋಚನೀಯವಾಗಿದೆ. ಇಲ್ಲಿ ರಾಜಕೀಯವಾಗಿ ಮಾತನ್ನು ಉಲ್ಲೇಖಿಸುವುದಲ್ಲ ಪ್ರತಿ ಬಾರಿ ವಿವಿಧ ಪಕ್ಷಗಳು ಅಧಿಕಾರಕ್ಕೆ ಬಂದರೂ ರೈತರನ್ನು ನಿರ್ಲಕ್ಷಿಸುತ್ತಿದೆ ಇದು ಬೇಸರದ ಸಂಗತಿ ಎಂದು ಪಂಚವರ್ಣ ಸಂಸ್ಥೆಯ ರೈತರ ಗೌರವಿಸುವ ಕಾರ್ಯ ನಿಜಕ್ಕೂ ಅರ್ಥಪೂರ್ಣ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಕೋಟದ ಗಿಳಿಯಾರು ಹರ್ತಟ್ಟು ಶ್ರೀಧರ (ಸಿದ್ಧ) ದೇವಾಡಿಗ ಇವರನ್ನು ಗೌರವಿಸಿಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ಯ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ವಾರ್ಡ ಸದಸ್ಯ ಪಾಂಡು ಪೂಜಾರಿ, ರೈತ ಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಹರ್ತಟ್ಟು ಯುವಕ ಮಂಡಲದ ಅಧ್ಯಕ್ಷ ಹರೀಷ್ ದೇವಾಡಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಸ್ಥಳೀಯರಾದ ಗುರುವ ಬಂಗೇರ,ಚಂದ್ರ ಹಾಡಿಕೆರೆ,ದಿನೇಶ್ ಪೂಜಾರಿ,ಬಾಬು ಶೆಟ್ಟಿ, ವಿಶ್ವನಾಥ ಹೇರ್ಳೆ,ಪಂಚವರ್ಣ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಪಂಚವರ್ಣ ಮಹಿಳಾಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಹಂದಟ್ಟು ಸನ್ಮಾನ ಪತ್ರ ವಾಚಿಸಿದರು.ಸದಸ್ಯೆ ಸುಜಾತ ಬಾಯರಿ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.
ರೈತರೆಡೆಯ ಅಂಗವಾಗಿ ಶ್ರೀಧರ (ಸಿದ್ಧ) ದೇವಾಡಿಗರ ಮನೆಯಂಗಳದಿ ಪರಿಸರಸ್ನೇಹಿ ಗಿಡ ನೆಟ್ಟು ,ಅವರಿಗೆ ಕೃಷಿ ಪರಿಕರ ನೀಡಿ ಗೌರವಿಸಲಾಯಿತು.











