ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಳೂರಿನಲ್ಲಿ ತಡೆದ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಮೂರು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಕೋಟ ಪೊಲೀಸರು ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೇಳೂರು ರಸ್ತೆಯ ದೇಲಟ್ಟು ಸಮೀಪ ಕಾರ್ಯಾಚರಿಸುತ್ತಿದ್ದರು. ಇದೇ ವೇಳೆ ಎರಡು ಬೈಕ್ ಗಳಲ್ಲಿ ಬಂದ ವ್ಯಕ್ತಿಗಳು ಪೊಲೀಸ್ ಜೀಪನ್ನು ಕಂಡು ಬೈಕ್ ತಿರುಗಿಸಿಕೊಂಡು ಪರಾರಿಯಾಗಲೆತ್ನಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಬೈಕ್ ಗಳನ್ನು ಹಿಂಬಾಲಿಸಿಕೊಂಡು ಹೋದ ಸಂದರ್ಭ ಜಾನುವಾರುಗಳನ್ನು ತುಂವಿಸಿಕೊಂಡಿದ್ದ ಗೂಡ್ಸ್ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಆರೋಪಿಗಳು ಪರಾರಿಯಾಗಿದ್ದಾರೆ.
ವಾಹನವನ್ನು ಪರಿಶೀಲಿಸಿದಾಗ ಹಿಂಸಾತ್ಮಕವಾಗಿ ಕಾಲುಗಳನ್ನು ಕಟ್ಟಿದ ಸ್ಥಿತಿಯಲ್ಲಿ ಮೂರು ದನಗಳು ಇರುವುದು ಕಂಡು ಬಂದಿದ್ದು, ಮೂರು ಜಾನುವಾರುಗಳನ್ನು ರಕ್ಷಿಸಿ, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಕೋಟ ಠಾಣೆಯಲ್ಲಿ ಪ್ರಕಾರ ಣ ದಾಖಲಾಗಿದೆ.










