ಉಚಿತ ನೋಟ್ ಬುಕ್ ಪುಸ್ತಕ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣಾ ಆನಂದೋತ್ಸವ ಕಾರ್ಯಕ್ರಮ

ಕುಂದಾಪುರ ಮಿರರ್ ಸುದ್ದಿ…
ಕೋಟ: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯತೆ ಇದೆ. ಈ ದಿಸೆಯಲ್ಲಿ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಗೀತಾನಂದ ಫೌಂಡೇಶನ್ ಸದಾ ಶ್ರಮಿಸುತ್ತಿದೆ ಎಂದು ನಾಡೋಜ ಡಾ.ಜಿ ಶಂಕರ್ ಹೇಳಿದರು.
ಶನಿವಾರ ಮಣೂರು ಸಂಯುಕ್ತ ಪ್ರೌಢಶಾಲೆಯ ಕೆ.ಸಿ ಕುಂದರ್ ಸಭಾಂಗಣದಲ್ಲಿ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ ಆನಂದೋತ್ಸವ ಉಚಿತ ನೋಟ್ ಬುಕ್ ಪುಸ್ತಕ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಸ್ತುತ ಹಣ ಇದ್ದವರು ಸಮಾಜದ ಹಾಗೂ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾರರು ಆದರೆ ಆನಂದ್ ಕುಂದರ್ ತನ್ನೂರಲ್ಲಿ ಶಿಕ್ಷಣದ ಕಾಶಿಯಾಗಿಸಿದ್ದಾರೆ. ತನ್ನ ದುಡಿಮೆ ಪಾಲಿನಲ್ಲಿ ಸಮಾಜಕ್ಕೆ ಅರ್ಪಿಸಿಕೊಂಡಿದ್ದಾರೆ ಇದು ಶ್ಲಾಘನಾರ್ಹ ಕಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ ಕರಾವಳಿಯಲ್ಲಿ ಈ ತಾಣದಲ್ಲಿ ಶಿಕ್ಷಣದ ಕಂಪು ಪಸರಿಸಿದ ಆನಂದ್ ಸಿ ಕುಂದರ್ ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನದೆ ಆದ ಕೊಡುಗೆಗಳನ್ನು ನೀಡುತ್ತಿದ್ದಾರೆ.ಇಲ್ಲಿನ ಶೈಕ್ಷಣಿಕ ಅಭಿವೃದ್ಧಿ ತನ್ನ ಶಾಸಕ ಸ್ಥಾನದಿಂದ ಸದಾ ಸಹಕಾರ ನೀಡಲಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಉಡುಪಿ ಕ್ಷೇತ್ರದ ಶಾಸಕ ಯಶ್‍ಪಾಲ್ ಸುವರ್ಣ ಇವರುಗಳನ್ನು ಗೌರವಿಸಲಾಯಿತು.
ಒಟ್ಟು 31.ಅಧಿಕ ಶಾಲೆಗಳ 5000 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಸ್ತಾಂತರಿಸಲಾಯಿತು.
ಪ್ರೌಢಶಾಲಾ ವಿಭಾಗದ ಎಸ್‍ಎಸ್‍ಎಸ್‍ಎಲ್‍ಸಿ ಅತ್ಯಧಿಕ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 21 ವಿದ್ಯಾರ್ಥಿಗಳನ್ನು ಮತ್ತು ಪದವಿಪೂರ್ವ ಕಾಲೇಜಿನ 18 ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹ ಧನ ನೀಡಿ ಗೌರವಿಸಲಾಯಿತು.
ಗೀತಾನಂದ ಫೌಂಡೇಶನ್ ಪ್ರತಿವರ್ಷ ನೀಡಲ್ಪಡುವ ಸಹಸ್ರ ಗಿಡ ನಡುವ ಕಾರ್ಯಕ್ರಮಕ್ಕೂ ಇದೇ ವೇಳೆ ಚಾಲನೆ ನೀಡಲಾಯಿತು.
ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಪ್ರಕಾಶ್ ತೋಳಾರ್, ರಾಜ್ಯ ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಕೋಟ ಪಡುಕರೆ ಲಕ್ಷ್ಮೀಸೋಮಬಂಗೇರ ಸ.ಪ್ರ.ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ, ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ,ಪ್ರಾಥಮಿಕ ವಿಭಾಗದ ಅಧ್ಯಕ್ಷ ನಾಗರಾಜ್, ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜೀತ್ ಕುಮಾರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್, ಪ್ರಾಥಮಿಕ ಶಾಲಾ ವಿಭಾಗ ಮುಖ್ಯ ಶಿಕ್ಷಕಿ ಜಯಂತಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಉದ್ಯಮಿ ಆನಂದ ಪಿ ಸುವರ್ಣ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಗೀತಾನಂದ ಫೌಂಡೇಶನ್ ಮಾನವ ಸಂಪನ್ಮೂಲ ಘಟಕದ ಮುಖ್ಯಸ್ಥ ಕೃಷ್ಣ,ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ ಕುಂದರ್, ಜನತಾ ಫಿಶ್ ಮಿಲ್ ನಿರ್ದೇಶಕ ಪ್ರಶಾಂತ್ ಕುಂದರ್ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ ಸ್ವಾಗತಿಸಿದರು.
ಕಾರ್ಯಕ್ರಮ ಸಂಯೋಜಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವನೆ ಸಲ್ಲಿಸಿದರು. ಪ್ರೌಢಶಾಲಾ ಸಿಕ್ಷಕ ರಾಮದಾಸ ನಾಯಕ್ ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸತ್ಯನಾರಾಯಣ ಆಚಾರ್ ಸಾಧಕ ವಿದ್ಯಾರ್ಥಿಗಳ ಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಪ್ರೌಢಶಾಲಾ ಶಿಕ್ಷಕ ಶ್ರೀಧರ ಶಾಸ್ತ್ರಿ ನಿರೂಪಿಸಿ ವಂದಿಸಿದರು. ಗೀತಾನಂದ ಸಮಾಜಕಾರ್ಯವಿಭಾಗದ ರವಿಕಿರಣ್ ಕೋಟ ಸಹಕರಿಸಿದರು.











