ಕುಂದಾಪುರ ಮಿರರ್ ಸುದ್ದಿ…

ಕೋಟ: ಇಲ್ಲಿನ ಕೋಟ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಗೀತಾನಂದ ಫೌಂಡೇಶನ್ ಕೊಡಮಾಡಿದ ಕಂಪ್ಯೂಟರ್ ಲ್ಯಾಬ್ ಅನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಲೋಕಾರ್ಪಣೆಗೊಳಿಸಿದರು.
ಗೀತಾನಂದ ಫೌಂಡೇಶನ್ ಸುಸಜ್ಜಿತ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಸಂದರ್ಭದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಪ್ರಕಾಶ್ ತೋಳಾರ್, ರಾಜ್ಯ ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಕೋಟ ಪಡುಕರೆ ಲಕ್ಷ್ಮೀಸೋಮಬಂಗೇರ ಸ.ಪ್ರ.ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ,ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ,ಪ್ರಾಥಮಿಕ ವಿಭಾಗದ ಅಧ್ಯಕ್ಷ ನಾಗರಾಜ್, ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜೀತ್ ಕುಮಾರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್, ಕೋಟ ಗ್ರಾಮಪಂಚಾಯತ್ ಸದಸ್ಯ ಪ್ರದೀಪ್ ಸಾಲಿಯಾನ್, ಪ್ರಾಥಮಿಕ ಶಾಲಾ ವಿಭಾಗ ಮುಖ್ಯ ಶಿಕ್ಷಕಿ ಜಯಂತಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಉದ್ಯಮಿ ಆನಂದ ಪಿ ಸುವರ್ಣ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಗೀತಾನಂದ ಫೌಂಡೇಶನ್ ಮಾನವ ಸಂಪನ್ಮೂಲ ಘಟಕದ ಮುಖ್ಯಸ್ಥ ಕೃಷ್ಣ,ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ ಕುಂದರ್, ಜನತಾ ಫಿಶ್‍ಮಿಲ್ ನಿರ್ದೇಶಕ ಪ್ರಶಾಂತ್ ಕುಂದರ್, ಮ್ಯಾನೇಜರ್ ಶ್ರೀನಿವಾಸ್ ಕುಂದರ್, ಪ್ರೌಢಶಾಲಾ ಶಿಕ್ಷಕ ಶ್ರೀಧರ ಶಾಸ್ತ್ರಿ , ಗೀತಾನಂದ ಸಮಾಜಕಾರ್ಯವಿಭಾಗದ ರವಿಕಿರಣ್ ಕೋಟ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ, ಉಪನ್ಯಸಕ ಸತ್ಯನಾರಾಯಣ ಇದ್ದರು.











