ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಗಾರ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಹೂಡಿಕೆಯ ಅರಿವು ಮತ್ತು ಅದರ ಮಹತ್ವ ಅತ್ಯವಶ್ಯಕ ಎಂದು ತಿಳಿಸಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನ್ನಾಡಿದರು.
ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೊರ್ಸ್ನ ಸಂಯೋಜಕರಾದ ಸುಧೀರ ಕುಮಾರ್ ಸ್ವಾಗತಿಸಿದರು. ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ವಂದಿಸಿದರು.
ವಿದ್ಯಾರ್ಥಿನಿ ಪವಿತ್ರ ಪೈ ಪ್ರಾರ್ಥಿಸಿ, ಸಮೃದ್ಧಿ ಕಿಣಿ ಕಾರ್ಯಕ್ರಮ ನಿರೂಪಿಸಿದರು.











