ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ಅಂಗ ಸಂಸ್ಥೆಗಳಾದ ಹಾಜಿ. ಕೆ ಮೊಹಿದ್ದೀನ್ ಬ್ಯಾರಿ ಸ್ಮಾರಕ ಅನುದಾನಿತ ಪ್ರೌಢಶಾಲೆ, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್, ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು, ಬ್ಯಾರೀಸ್ ಬಿ.ಎಡ್ ಕಾಲೇಜು ಹಾಗೂ ಬ್ಯಾರೀಸ್ ಡಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ಸಕ್ರಿಯವಾಗಿ ಯೋಗ ಮಾಡುವುದರ ಮೂಲಕ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.
ಇದೇ ಸಂದರ್ಭದಲ್ಲಿ “ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಆರೋಗ್ಯ ಹಾಗೂ ದೇಹದ ಸಮತೋಲನವನ್ನು ಸದೃಢಗೊಳಿಸುತ್ತದೆ” ಎಂದು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್ ರವರು ಶುಭ ಹಾರೈಸುವ ಮೂಲಕ ಚಾಲನೆ ನೀಡಿದರು.
ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕರಾದ ವೆಂಕಟೇಶ್ ಎಸ್, ಪದವಿ ಕಾಲೇಜಿನ ಉಪನ್ಯಾಸಕರಾದ ಅಶೋಕ್ ಜೋಗಿ ಹಾಗೂ ಬಿ.ಎಡ್ ಪ್ರಶಿಕ್ಷಣಾರ್ಥಿಗಳು ವಿವಿಧ ಆಸನಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ ಅಭ್ಯಾಸ ಮಾಡಿಸಿದರು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜಕರಾದ ಆಕಾಶ್, ಸಲಹೆಗಾರರಾದ ಅಬುಶೆಕ್ ಸಾಹೇಬ್, ವಿಶ್ವಸ್ಥ ಮಂಡಳಿಯ ಸದಸ್ಯರಾದ ಡಾ. ಆಸೀಫ್, ವಿವಿಧ ವಿಭಾಗಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ದೈಹಿಕ ನಿರ್ದೇಶಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.











