ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರನ್ನು ಕುಂದಾಪುರ ಜೂನಿಯರ್ ( ಬೋರ್ಡ್ ಹೈಸ್ಕೂಲ್) ಕಾಲೇಜಿನ ಆಡಳಿತ ಸಮಿತಿ ಮತ್ತು ಉಪನ್ಯಾಸಕ ವ್ರಂದದ ವತಿಯಿಂದ ಸನ್ಮಾನಿಸಲಾಯಿತು.
ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು ಕುಂದಾಪುರದ ಸರ್ಕಾರೀ ಜ್ಯೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಶಾಸಕರಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಚಾರ. ಶಾಸಕರ ಅವಧಿಯಲ್ಲಿ ಕುಂದಾಪುರವು ಸರ್ವತೋಮುಖ ಅಭಿವೃದ್ಧಿ ಹೊಂದಲಿ ಎಂದು ಹಾರೈಸಲಾಯಿತು.
ಈ ಸಂದರ್ಭ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಉಪಪ್ರಾಂಶುಪಾಲ ಕಿರಣ್ ಹೆಗ್ಡೆ, ಹಿರಿಯ ಉಪನ್ಯಾಸಕ ಭುಜಂಗ ಶೆಟ್ಟಿ, ಪ್ರೌಢಶಾಲಾ ಹಿರಿಯ ಶಿಕ್ಷಕಿ ವಿನುತಾ ಗಾಂವ್ಕರ್, ಉದಯ್ ಕುಮಾರ್ ಶೆಟ್ಟಿ , ಕಾಲೇಜು ಅಭಿವೃದ್ಧಿ ಸಮಿತಿಯ ಅನಂತ್ ಕೃಷ್ಣ ಕೊಡ್ಗಿ, ಕೆ ನಾರಾಯಣ್, ಪ್ರೌಢಶಾಲಾ ಮತ್ತು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.










