ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜು.29ರಂದು ಭೌತಶಾಸ್ತ್ರದ ಉಪನ್ಯಾಸಕರಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿಯವರು ಕಾರ್ಯಾಗಾರವನ್ನು ಉದ್ಘಾಟಿಸಿ, ಉಪನ್ಯಾಸಕರು ಅತ್ಯುತ್ತಮ ಬೋಧನಾ ಶೈಲಿಯನ್ನು ಅಳವಡಿಸಿ ಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತ ರಾಗಬೇಕು ಎಂದು ತಿಳಿಸಿದರು.
ಬಿದ್ಕಲ್ ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಡುಪಿ ಜಿಲ್ಲಾ ಭೌತ ಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರು ಆಗಿರುವ ವಿಘ್ನೇಶ್ವರ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಗೌರವಾಧ್ಯಕ್ಷರಾದ ಯು. ಲಕ್ಷ್ಮೀನಾರಾಯಣ ಛಾತ್ರ ಶುಭಶಂಸನೆಗೈದರು. ಮುಖ್ಯ ಅತಿಥಿಯಾಗಿ ಗೋವಾ ವಿಶ್ವ ವಿದ್ಯಾಲಯದಲ್ಲಿ ಭೌತಶಾಸ್ತ್ರ ಹಾಗೂ ಅನ್ವಯಿಕ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಡಾ. ವೆಂಕಟೇಶ್. ಆರ್.ಹತ್ವಾರ್ ಉಪಸ್ಥಿತರಿದ್ದರು.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಯವರು ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿಗಳಾದ ಸಿ. ಎಸ್. ಉಮಾಪತಿ ಸ್ವಾಗತಿಸಿದರು. ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಖಜಾಂಚಿ ಸದಾನಂದ ಅವರು ವಂದಿಸಿದರು. ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಭರತ್ ಚಂದ್ರ.ಕೆ ಕಾರ್ಯಕ್ರಮ ನಿರೂಪಿದರು.












