ಕುಂದಾಪುರ :ಕಾರ್ಯಾಲಯ, ಶಾಸಕರು ಜನಸಮಾನ್ಯರ ನಡುವಿನ ಸೇತುವೆಯಾಗಲಿ – ಬಿ.ಅಪ್ಪಣ್ಣ ಹೆಗ್ಡೆ

0
443

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಉತ್ತರಾಧಿಕಾರಿಯಾಗಿ, ನಮ್ಮೆಲ್ಲರ ಪ್ರತಿನಿಧಿಯಾಗಿ ಕಿರಣ್ ಕೊಡ್ಗಿಯವರು ಇವತ್ತು ಕ್ಷೇತ್ರದ ಶಾಸಕರಾಗಿದ್ದಾರೆ. ಮಿತ ಭಾಷಿ, ಒಳ್ಳೆಯ ಕಾರ್ಯಕರ್ತ, ಜನಸೇವಕ, ಜನರ ಜೊತೆ ಉತ್ತಮ ಒಡನಾಟ ಇರುವುದರಿಂದ ಕ್ಷೇತ್ರದ ಸಮಗ್ರ ಅಭಿವೃದ್ದಿ ಆಗುತ್ತದೆ. ತಾರತಮ್ಯ, ಪಕ್ಷಪಾತ ಇಲ್ಲದೆ ಎಲ್ಲರನ್ನು ಸಮಾನ ಮನಸ್ಥಿತಿಯಲ್ಲಿ ನೋಡುವ ಮೂಲಕ ಶಾಸಕ ಕಿರಣ್ ಕೊಡ್ಗಿಯವರು ಕ್ಷೇತ್ರವನ್ನು ಅಭಿವೃದ್ದಿಗೊಳಿಸಿಲಿ. ಅದಕ್ಕೆ ಪೂರಕವಾಗಿ ಶಾಸಕರ ಕಾರ್ಯಾಲಯವು ಕೂಡಾ ಶಾಸಕರು ಮತ್ತು ಜನಸಮಾನ್ಯರ ನಡುವಿನ ಸೇತುವೆಯಾಗಲಿ ಎಂದು ಮಾಜಿ ಶಾಸಕ, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

ಕುಂದಾಪುರ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರ ನೂತನ ಶಾಸಕರ ಕಚೇರಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಇವತ್ತಿನ ದಿನಗಳಲ್ಲಿ ರಾಜಕೀಯ ಒಂದು ದಂಧೆಯಾಗಿ ಮಾರ್ಪಟ್ಟಿದೆ. ಕರಾವಳಿಯ ಜಿಲ್ಲೆಗಳಲ್ಲಿ ಸೇವಾಮನೋಭಾವದ ಶಾಸಕರನ್ನು ಕಾಣಬಹುದಾಗಿದೆ. ನಾನು ಶಾಸಕನಾದ ಸಂದರ್ಭದಲ್ಲಿ ಹೀಗಿರಲಿಲ್ಲ. ಹಣದ ಪಾತ್ರ ಆಗ ಗೌಣವಾಗಿತ್ತು. ಸೇವೆಗೆ ವಿಫುಲವಾದ ಅವಕಾಶವಿತ್ತು. ಇವತ್ತು ಕಾಲ ಬದಲಾಗಿದೆ ಎಂದರು.

Click Here

ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಅಭಿವೃದ್ಧಿ ಹಾದಿಯಲ್ಲಿ ಶಾಸಕ ಕಿರಣ ಕೊಡ್ಗಿಯವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕುಂದಾಪುರ ಜನನಿಬಿಡ ಪ್ರದೇಶದಲ್ಲಿ ಶಾಸಕರ ಕಾರ್ಯಾಲಯ ಆರಂಭಿಸಿದ್ದಾರೆ. ಶಾಸಕರನ್ನು ಭೇಟಿ ಮಾಡಲು, ಅಹವಾಲು ಸಲ್ಲಿಸಲು ಶಾಸಕರ ಮನೆಗೇ ಹೋಗಬೇಕಾಗಿಲ್ಲ. ಕಚೇರಿಯಲ್ಲಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಈ ಶಾಸಕರ ಕಛೇರಿ ಜನಸಾಮಾನ್ಯರು, ಪಂಚಾಯತ್ ಪ್ರತಿನಿಧಿಗಳು, ಕಾರ್ಯಕರ್ತರಿಗೆ ಅನುಕೂಲವಾಗಲಿ. ಕ್ಷೇತ್ರದ ಅಭಿವೃದ್ದಿಗೆ ಇದು ಪೂರಕವಾಗಿ ರೂಪುಗೊಳ್ಳಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಇದು ಶಾಸಕರ ಕಛೇರಿಯಾದರೂ ಸರ್ಕಾರಿ ಕಚೇರಿ ಇದ್ದಂತೆ. ಜನರು ತಮ್ಮ ಸಮಸ್ಯೆ ಇಲ್ಲಿ ಬಂದು ಪರಿಹಾರ ಕಂಡುಕೊಳ್ಳಬಹುದು. ಪ್ರತಿ ಶನಿವಾರ ನಾನು ಇಲ್ಲಿ ಲಭ್ಯವಿರುತ್ತೇನೆ. ಉಳಿದ ದಿನಗಳಲ್ಲಿ ಇಬ್ಬರು ಆಪ್ತ ಸಹಾಯಕರು ಕಚೇರಿಯಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಕಾಡೂರು ಸುರೇಶ್ ಶೆಟ್ಟಿ, ರಾಜೇಶ್ ಕಾವೇರಿ, ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಭಾಸ್ಕರ ಬಿಲ್ಲವ ಹೇರಿಕುದ್ರು, ಸಂಪತ್ ಕುಮಾರ್ ಶೆಟ್ಟಿ, ರಮೇಶ ಶೆಟ್ಟಿ, ಅಲ್ತಾರು ಗೌತಮ್ ಹೆಗ್ಡೆ, ಸದಾನಂದ ಬಳ್ಕೂರು, ಮಡಾಮಕ್ಕಿ ಶಶಿಧರ್ ಶೆಟ್ಟಿ, ಶ್ರೀಲತಾ ಸುರೇಶ್ ಶೆಟ್ಟಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಸ್ವಾಗತಿಸಿದರು. ರೂಪಾ ಪೈ ವಂದೇ ಮಾತರಂ ಹಾಡಿದರು. ಆಪ್ತ ಸಹಾಯಕ ಮಹಿಮ್ ಶೆಟ್ಟಿ ನಿರೂಪಿಸಿದರು. ಪುರಸಭಾ ಸದಸ್ಯ ಸಂತೋಷ್ ಕುಮಾರ್ ಶೆಟ್ಟಿ ವಂದಿಸಿದರು.

Click Here

LEAVE A REPLY

Please enter your comment!
Please enter your name here