ಗ್ರಾಮೀಣ ಪರಿಸರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ವಿಷಯದ ತರಬೇತಿ ಅಗತ್ಯ- ವಾದಿರಾಜ್ ಭಟ್

0
190

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ :ಪ್ರಸ್ತುತ ಸ್ಪರ್ಧಾ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಯಾಗುವುದು ವಿದ್ಯಾರ್ಥಿಗಳಿಗೆ ಸವಾಲಾಗಿರುತ್ತದೆ. ಹೆಚ್ಚಿನ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳು ಇದರಿಂದ ವಂಚಿತರಾಗುತ್ತಾರೆ. ಈ ಕೊರೆತೆ ನೀಗಿಸಲು ಗ್ರಾಮೀಣ ಭಾಗದಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುತ್ತಿರುವ ವಿ-ಶೈನ್ ಕೋಚಿಂಗ್ ಸೆಂಟರ್‍ನ ಕಾರ್ಯ ಶ್ಲಾಘನೀಯ ಎಂದು ಮಣಿಪಾಲ ಮಾಹೆ ಪ್ರಾಧ್ಯಪಕ ವಾದಿರಾಜ್ ಭಟ್ ಹೇಳಿದರು.

ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್‍ನ ಪಿ.ಡಿ.ಓ ಹಾಗೂ ಕಾರ್ಯದರ್ಶಿ ಪರೀಕ್ಷೆಯ ತರಬೇತಿಯ ಮೊದಲ ಬ್ಯಾಚ್‍ನ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

Click Here

ವಿ ಶೈನ್ ಕೋಚಿಂಗ್ ಸೆಂಟರ್‍ನ ಸಂಚಾಲಕ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತರಬೇತಿಯಿಂದ ವಂಚಿತರಾಗುತ್ತಿರುವುದನ್ನು ಮನಗೊಂಡು ಈ ತರಬೇತಿ ಸಂಸ್ಥೆಯನ್ನು ಆರಂಭಿಸಿದ್ದು, ಶೀಘ್ರದಲ್ಲೇ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಯ ತರಗತಿಯನ್ನು ಆರಂಭಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ವಿ-ಶೈನ್ ಕೋಚಿಂಗ್ ಸೆಂಟರ್‍ನ ಗಿರೀಶ್ ಕುಮಾರ್ ಶೆಟ್ಟಿ, ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here