ಕುಂದಾಪುರ ಮಿರರ್ ಸುದ್ದಿ…
ಬೈಂದೂರು : ಕುಂದಾಪುರ ತಾಲೂಕಿನ ಚಿತ್ತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಅರಣ್ಯ ಇಲಾಖೆ ಕುಂದಾಪುರ ವಲಯದ ವಂಡ್ಸೆ ಘಟಕದ ನೇತೃತ್ವದಲ್ಲಿ ಸಸಿ ವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಪೂಜಾರಿ ಉದ್ಘಾಟಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲ ಹಾಗೂ ಸರ್ವ ಸದಸ್ಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಉಪ ವಲಯ ಅರಣ್ಯಾಧಿಕಾರಿ ಆನಂದ ಬಳೆಗಾರ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ ಗಾಣಿಗ, ರಾಘವೇಂದ್ರ ಮತ್ತು ಸಂಘ-ಸಂಸ್ಥೆಯ ವಿವಿಧ ಪದಾಧಿಕಾರಿಗಳು ಹಾಗೂ ಸ್ಥಳೀಯರು ಹಾಜರಿದ್ದರು.











