ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬೈಂದೂರು ತಾಲೂಕಿನ ಗುಲ್ವಾಡಿ ಗ್ರಾಮದ ಸೌಕೂರು ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮಾವಿನಗುಳಿ ಶಾಲೆಗೆ ಸುಚಿತ್ ಶೆಟ್ಟಿ ಕೌನ್ಜೂರು ಇವರು ಉಚಿತವಾಗಿ ನೀಡಿದ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು. ಗುಲ್ವಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ ಗುಲ್ವಾಡಿ, ಎಸ್ಡಿಎಂಸಿ ಅಧ್ಯಕ್ಷರಾದ ಭಾಸ್ಕರ್ ಭಂಡಾರಿ, ನಿತೇಶ್ ಗುಲ್ವಾಡಿ ಶಾಲಾ ಮುಖ್ಯೋಪಾಧ್ಯಾಯಿನಿ ನಮ್ರತಾ ಭಟ್ ಹಾಗೂ ಮಂಜುಳಾ ಪೂಜಾರಿಯವರು ಮಕ್ಕಳಿಗೆ ಬ್ಯಾಗುಗಳನ್ನು ಹಸ್ತಾಂತರಿಸಿದರು. ಇದೇ ಸಂದರ್ಭ ಬ್ಯಾಗ್ ನೀಡಿದ ದಾನಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮಕ್ಕಳ ಪೋಷಕರು ಕೃತಜ್ಞತೆ ಸಲ್ಲಿಸಿದರು











