ದ.ಕ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಕಾರ್ಯಕ್ರಮ

0
218

Click Here

Click Here

ಹೈನುಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಅಗತ್ಯ – ಕಿಶನ್ ಹೆಗ್ಡೆ ಕೊಳ್ಕೆಬೈಲ್

ಕುಂದಾಪುರ ಮಿರರ್ ಸುದ್ದಿ…
ಕೋಟ: ಹೈನುಗಾರಿಕಾ ಕ್ಷೇತ್ರದಲ್ಲಿ ಒಂದಿಷ್ಟು ಬದಲಾವಣೆ ತರಬೇಕಾದ ಅವಶ್ಯಕತೆ ಇದೆ ಎಂದು ಶಿರಿಯಾರ ಮೆಕ್ಕೆಕಟ್ಟೆ ಶ್ರೀ ನಂದಿಕೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿದರು

Click Here

ಕೋಟ ಸಿ ಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಸಾಸ್ತಾನ ಶಿಬಿರ ಕಛೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಇತ್ತೀಚಿಗೆ ದ.ಕ ಹಾಲು ಉತ್ಪಾದಕರ ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಕೆಳವರ್ಗದ ಸಿಬ್ಬಂದಿಗಳ ಬಗ್ಗೆ ಹೆಚ್ಚಿನ ಮುತುವರ್ಜಿ ಹಾಗೂ ಪ್ರೋತ್ಸಾಹ ನೀಡಬೇಕಾದ ಅಗತ್ಯತೆ ಇದೆ
ಏಕೆಂದರೆ ಮೇಲ್ವರ್ಗದ ಅಧಿಕಾರಿಗಳಿಗಿಂತ ಕೆಳವರ್ಗದ ಸಿಬ್ಬಂದಿಗಳ ಸಮಸ್ಯೆ ಆಲಿಸುವುದು ಇತ್ತೀಚಿಗಿನ ದಿನಗಳಲ್ಲಿ ಕ್ಷೀಣಿಸುತ್ತಿದೆ, ಇದು ಬೇಸರದ ಸಂಗತಿ ಅವರ ಕಾರ್ಯಭಾರದಿಂದಲೇ ಹಾಲು ಉತ್ಪಾದಕ ಸಹಕಾರಿ ಕ್ಷೇತ್ರ ಗಟ್ಟಿಗೊಳ್ಳುತ್ತಿದೆ.ಹೈನುಗಾರಿಕೆ ಕ್ಷೇತ್ರದಲ್ಲಿ ಬಹಳಷ್ಟು ಉನ್ನತಿ ಕಂಡಿದ್ದೇವೆ ಅವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಆ ಮೂಲಕ ಹೈನುಗಾರಿಕೆ ಇನ್ನಷ್ಟು ಗಟ್ಟಿಗೊಳಿಸುವ ಕಾರ್ಯ ಮಾಡಬೇಕು, ಸಹಕಾರಿ ಕ್ಷೇತ್ರದಲ್ಲಿ ಸಶಕ್ತರಾಗಿಸಿ ಆರ್ಥಿಕವಾಗಿ ಬಲಾಢ್ಯರಾಗಿಸಲು ಯೋಜನೆ ರೂಪಿಸಬೇಕು,ಅಲ್ಲಿನ ಕಟ್ಟ ಕಡೆಯ ನೌಕರರಿಗೂ ನ್ಯಾಯ,ಭದ್ರತೆ ಒದಗಿಸಬೇಕು ,ವೃತ್ತಿಯಲ್ಲಿ ನಿವೃತ್ತರಾದವರು ಪ್ರವೃತ್ತಿಯಾಗಿ ಕಾರ್ಯನಿರ್ವಹಿಸಬೇಕು ಅದನ್ನು ನಾವುಗಳು ಸನ್ಮಾನಗೊಂಡ ಭಕ್ತರಲ್ಲಿ ಕಂಡಿದ್ದೇವೆ ಇವರನ್ನು ಗುರುತಿಸುವ ನಿಮ್ಮ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆಯನ್ನು ದ.ಕ ಹಾಲು ಉತ್ಪಾದಕರ ಒಕ್ಕೂಟದ ಇದರ ಮಾಜಿ ಅಧ್ಯಕ್ಷ ಐರೋಡಿ ಜಗದೀಶ್ ಕಾರಂತ್ ವಹಿಸಿದ್ದರು.
ಈ ಸಂದರ್ಭದಲ್ಲಿ ದ.ಕ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.

ಮುಖ್ಯ ಅಭ್ಯಾಗತರಾಗಿ ಕೋಟ ಸಿ.ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, , ದ.ಕ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಮಾಜಿ ನಿರ್ದೇಶಕರಾದ ಜಾನಕಿ ಹಂದೆ, ದ.ಕ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಉಪ ವ್ಯವಸ್ಥಾಪಕ ಡಾ.ಅನಿಲ್ ಕುಮಾರ್ ಶೆಟ್ಟಿ, ಡಾ.ಮಾಧವ ಐತಾಳ್, ದ.ಕ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರ್ಣಾಧಿಕಾರಿ ಸರಸ್ವತಿ , ದ.ಕ ಹಾಲು ಉತ್ಪಾದಕರ ಒಕ್ಕೂಟದ ಸಾಸ್ತಾನ ಶಿಬಿರ ಕಛೇರಿ ಇದರ ಪಶುವೈದ್ಯಾಧಿಕಾರಿ ನಿಜಾಮ್ ಪಾಟೀಲ್ ಉಪಸ್ಥಿತರಿದ್ದರು. ಕೋಟ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ವಿಜಯ್ ಪ್ರಾರ್ಥನೆಗೈದರು. ಕಾರ್ಯಕ್ರಮವನ್ನು ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಾತ ಬಾಯರಿ ನಿರೂಪಿಸಿದರು. ಎತ್ತಿನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ವಂದಿಸಿದರು.

Click Here

LEAVE A REPLY

Please enter your comment!
Please enter your name here