ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ – ಶಿಕ್ಷಕರ ಸಭೆ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸುನಿಲ್ ರವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ್ ಪೂಜಾರಿಯವರು ಸ್ವಾಗತಿಸಿ, ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.











